'ಇಸ್ಮಾರ್ಟ್ ಜೋಡಿ' ರಿಯಾಲಿಟಿ ಶೋ ಮೂಲಕ ಮತ್ತೆ ಕಿರುತೆರೆಗೆ ಗೋಲ್ಡನ್ ಸ್ಟಾರ್ ಗಣೇಶ್ ಎಂಟ್ರಿ!
ಗೋಲ್ಡನ್ ಸ್ಟಾರ್ ಗಣೇಶ್ ನಿರೂಪಣೆ ಮಾಡುತ್ತಿರುವ 'ಇಸ್ಮಾರ್ಟ್ ಜೋಡಿ' ಸೆಲೆಬ್ರಿಟಿ ಕಪಲ್ಸ್ ಶೋ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.

ಗೋಲ್ಡನ್ ಸ್ಟಾರ್ ಗಣೇಶ್ ನಿರೂಪಣೆ ಮಾಡುತ್ತಿರುವ 'ಇಸ್ಮಾರ್ಟ್ ಜೋಡಿ' ಸೆಲೆಬ್ರಿಟಿ ಕಪಲ್ಸ್ ಶೋ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಈ ಶೋ ಪ್ರಸಾರವಾಗಲಿದ್ದು, ಜುಲೈ 16 ರಿಂದ ಶನಿವಾರ ಮತ್ತು ಭಾನುವಾರ ರಾತ್ರಿ 9 ರಿಂದ 10.30ರ ತನಕ 'ಇಸ್ಮಾರ್ಟ್ ಜೋಡಿ' ಪ್ರಸಾರವಾಗಲಿದೆ.
ಇದುವರೆಗೂ ಮನರಂಜನೆಯ ಮತ್ತು ಸ್ನೇಹದ ಕುರಿತಾದ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿರುವ ಗಣೇಶ್ ಈಗ ಮೊದಲ ಬಾರಿಗೆ ಸೆಲೆಬ್ರಿಟಿ ಜೋಡಿಗಳ ಕುರಿತಾಗಿ ಒಂದು ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ.
ಇಸ್ಮಾರ್ಟ್ ಜೋಡಿ’ ಕಾರ್ಯಕ್ರಮದಲ್ಲಿ ಹೊಸದಾಗಿ ಮದುವೆಯಾದವರಿಂದ 40 ವರ್ಷ ದಾಂಪತ್ಯ ಜೀವನ ನಡೆಸಿದ ಹಿರಿಯರವರೆಗೂ 10 ಜೋಡಿಗಳು ಭಾಗವಹಿಸುತ್ತಿವೆ. ‘ಇವತ್ತಿನ ದಿನಗಳಲ್ಲಿ ದಂಪತಿಗಳು ಸಣ್ಣಸಣ್ಣ ವಿಷಯಕ್ಕೂ ಬಹಳ ಬೇಗ ದೂರ ಆಗುವ ಸುದ್ದಿ ಕೇಳುತ್ತಿರುತ್ತೇವೆ. ಜೀವನ ಎಂದರೆ ಅದಲ್ಲ. ಇಲ್ಲಿ ಏಳುಬೀಳು, ಸುಖ-ಸಂತೋಷ ಎಲ್ಲವೂ ಇರುತ್ತದೆ ಎಂಬುದನ್ನು ಹೇಳುವ ಪ್ರಯತ್ನ ಇದಾಗಿದೆ.
ಗಣೇಶ್ ಪ್ರೀತಂ ಗುಬ್ಬಿ ನಿರ್ದೇಶನದ ರೊಮ್ಯಾಂಟಿಕ್ ಸಿನಿಮಾ ಬಾನ ದಾರಿಯಲ್ಲಿ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಚಿತ್ರಕ್ಕೆ ಛಾಯಾಗ್ರಾಹಕಿ ಪ್ರೀತಾ ಜಯರಾಮನ್ ಕಥೆ ಬರೆದಿದ್ದಾರೆ. ಇದರಲ್ಲಿ ರುಕ್ಮಿಣಿ ವಸಂತ್ ಮತ್ತು ರೀಷ್ಮಾ ನಾಣಯ್ಯ ನಾಯಕಿಯರಾಗಿ ನಟಿಸಿದ್ದಾರೆ. ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದು, ಅಭಿಲಾಷ್ ಕಲಾತಿ ಛಾಯಾಗ್ರಹಣವನ್ನು ನಿಭಾಯಿಸುತ್ತಿದ್ದಾರೆ. ಮಹೇಶ್ ಗೌಡ ನಿರ್ದೇಶನದ ಟ್ರಿಬಲ್ ರೈಡಿಂಗ್ ಬಿಡುಗಡೆಗೆ ಗಣೇಶ್ ಕೂಡ ಕಾಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


