ಪ್ರಜ್ವಲ್ ದೇವರಾಜ್ ನಟನೆಯ 'ಅಬ್ಬರ' ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್!
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಅಬ್ಬರ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಆಗಸ್ಟ್ 12ರಂದು ಅಬ್ಬರ ಚಿತ್ರ ರಾಜ್ಯಾದ್ಯಂತ ತೆರೆಕಾಣಲಿದೆ.

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಅಬ್ಬರ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಆಗಸ್ಟ್ 12ರಂದು ಅಬ್ಬರ ಚಿತ್ರ ರಾಜ್ಯಾದ್ಯಂತ ತೆರೆಕಾಣಲಿದೆ.
ಈ ಹಿಂದೆ ಟೈಸನ್ ಮತ್ತು ಕ್ರ್ಯಾಕ್ ಮುಂತಾದ ಸಿನಿಮಾಗಳನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿರುವ ನಿರ್ದೇಶಕ ರಾಮ್ ನಾರಾಯಣ್ ಅಬ್ಬರ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ.
ನಿಮಿಕಾ ರತ್ನಾಕರ್, ಲೇಖಾ ಚಂದ್ರು ಮತ್ತು ರಾಜಶ್ರೀ ನಾಯಕಿಯರಾಗಿ ನಟಿಸಿರುವ ಚಿತ್ರದಲ್ಲಿ ಪ್ರಜ್ವಲ್ ಐದು ವಿಭಿನ್ನ ಶೇಡ್ ಗಳಲ್ಲಿಕಾಣಸಿಕೊಂಡಿದ್ದಾರೆ. ರವಿಶಂಕರ್ ಖಳನಾಯಕನಾಗಿ ನಟಿಸಿದ್ದಾರೆ. ಅಬ್ಬರದಲ್ಲಿ ಶೋಭರಾಜ್ ಮತ್ತು ಕೋಟೆ ಪ್ರಭಾಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರದ ಹಾಡುಗಳಿಗೆ ರವಿ ಬಸ್ರೂರು ಅದ್ಭುತವಾದ ಸಂಗೀತ ನೀಡಿದ್ದಾರೆ. ಜೆ.ಕೆ.ಗಣೇಶ್ ಅವರ ಛಾಯಾಗ್ರಹಣ, ವೆಂಕಟೇಶ್ ಯುಡಿವಿ ಅವರ ಸಂಕಲನ, ವಿನೋದ್, ಪಳನಿರಾಜ್,ಮಾಸ್ ಮಾದ ಅವರ ಸಾಹಸ, ರಾಮು, ಮೋಹನ್, ಕಲೈ, ಭೂಷಣ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಬಸವರಾಜ್ ಮಂಚಯ್ಯ ಈ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


