ಕಿರುತೆರೆ ನಟ ಯಲಹಂಕ ಬಾಲಾಜಿ ನಿಧನ: ಆತ್ಮೀಯ ಗೆಳೆಯನ ಅಗಲಿಕೆಗೆ ಟಿ.ಎನ್ ಸೀತಾರಾಂ ಕಂಬನಿ
ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದ ಹಿರಿಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ಧಾರೆ.

ಬೆಂಗಳೂರು: ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದ ಹಿರಿಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ಧಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಹಿರಿಯ ನಟ ಬಾಲಾಜಿ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟ ಬಾಲಾಜಿ ರಾಜಕೀಯ ಕ್ಷೇತ್ರದಲ್ಲಿಯೂ ತೊಡಗಿಕೊಂಡಿದ್ದರು. ಹಿರಿಯ ಕಲಾವಿದನ ಅಗಲಿಕೆಗೆ ಸ್ಯಾಂಡಲ್ವುಡ್ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.
ಇನ್ನೂ ಕಿರುತೆರೆ ನಟ ಯಲಹಂಕ ಬಾಲಾಜಿ ನಿಧನಕ್ಕೆ ನಿರ್ದೇಶಕ ಸೀತಾರಾಮ್ ತಳಗವಾರ ಅವರು, ಫೇಸ್‌ಬುಕ್ ಪೋಸ್ಟ್ ಮೂಲಕ ನೋವು ತೋಡಿಕೊಂಡಿದ್ದಾರೆ. ನನ್ನ ಆತ್ಮೀಯ ಗೆಳೆಯ ಯಲಹಂಕ ಬಾಲಾಜಿ ಅಲ್ಪ ಕಾಲದ ಅನಾರೋಗ್ಯದ ನಂತರ ನಿಧನ ಹೊಂದಿದ್ದಾರೆ. ನನ್ನ ಎಲ್ಲಾ ಧಾರಾವಾಹಿ ಗಳಲ್ಲೂ ನಟಿಸಿದ್ದರು. ಮಾಯಾಮೃಗ ದಿಂದ , ಮಗಳು ಜಾನಕಿಯ ವರೆಗೆ..... ಅತ್ಯಂತ ಹೃದಯವಂತ ಗೆಳೆಯ. ಎಲ್ಲ ಕಷ್ಟ ಗಳಲ್ಲೂ, ಸಂತೋಷಗಳಲ್ಲೂ ಜತೆಗೆ ಇರುತ್ತಿದ್ದ ಮನುಷ್ಯ. ಇಡೀ ಬದುಕಿನುದ್ದಕ್ಕೂ ಕಷ್ಟ ಕಂಡಿದ್ದರೂ ನಗುತ್ತಾ ಬದುಕಿದ ಗೆಳೆಯ. ಬಾಲಾಜಿ ಇನ್ನಿಲ್ಲ ಎಂದು ನೆನೆಸಿಕೊಂಡರೆ ಅಪಾರ ಸಂಕಟವಾಗುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.
‘ಮಾಯಾಮೃಗ’, ‘ಮುಕ್ತ ಮುಕ್ತ’, ‘ಮಹಾ ಪರ್ವ’, ‘ಮನ್ವಂತರ’, ‘ಮುಕ್ತ’, ‘ಮಿಂಚು’, ‘ಮಗಳು ಜಾನಕಿ’, ‘ಚಂದಿರ’ ಮುಂತಾದ ಧಾರಾವಾಹಿಗಳಲ್ಲಿ ಯಲಹಂಕ ಬಾಲಾಜಿ ಅಭಿನಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


