ಸಿನಿಮಾ ಸುದ್ದಿ

ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಲಯಾಳಂ ನಟ ಎನ್ ಡಿ ಪ್ರಸಾದ್ ಶವ ಪತ್ತೆ!

ಮಲಯಾಳಂ ಜನಪ್ರಿಯ ನಟ ಎನ್ ಡಿ ಪ್ರಸಾದ್ ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಲಯಾಳಂ ನಟ ಎನ್ ಡಿ ಪ್ರಸಾದ್ ಶವ ಪತ್ತೆ!
ಎನ್ ಡಿ ಪ್ರಸಾದ್
Published On :

ತಿರುವನಂತಪುರಂ: ಮಲಯಾಳಂ ಜನಪ್ರಿಯ ನಟ ಎನ್ ಡಿ ಪ್ರಸಾದ್ ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತದೇಹ ಕೊಚ್ಚಿ ಬಳಿಯ ಕಲಮಸ್ಸೆರಿಯಲ್ಲಿ ತಮ್ಮ ಮನೆಯ ಹೊರಗಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಸಾದ್ ಅವರ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಮಕ್ಕಳೇ ತಮ್ಮ ತಂದೆಯ ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೌಟುಂಬಿಕ ಕಲಹ ಅವರ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ.

ಕೆಲ ತಿಂಗಳುಗಳಿಂದ ಪತ್ನಿಯಿಂದ ದೂರ ಉಳಿದಿರುವ ಅವರು ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಪ್ರಸಾದ್ ಅವರ ಮಾದಕ ದ್ರವ್ಯ ಸೇವನೆ ಆರೋಪ ಎದುರಾಗಿತ್ತು. 2021ರಲ್ಲಿ ಸಿಂಥೆಟಿಕ್ ಡ್ರಗ್ಸ್ (2.5 ಗ್ರಾಂ ಹ್ಯಾಶಿಶ್ ಆಯಿಲ್ ಮತ್ತು 15 ಗ್ರಾಂ ಗಾಂಜಾ) ಹೊಂದಿದ್ದರು ಎಂಬ ಕಾರಣಕ್ಕೆ ಅಬಕಾರಿ ಇಲಾಖೆ ಪ್ರಸಾದ್ ಅವರನ್ನು ಬಂಧಿಸಿತ್ತು. ಜತೆಗೆ ಮಾರಕಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿತ್ತು.

ಎನ್‌ಡಿ ಪ್ರಸಾದ್ ಅನೇಕ ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದರೂ ಆಕ್ಷನ್ ಹೀರೋ ಬಿಜು ಚಿತ್ರದಲ್ಲಿನ ಅವರ ಅಭಿನಯವು ಅವರ ಖ್ಯಾತಿಯನ್ನು ಹೆಚ್ಚಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.