ಸಿನಿಮಾ ಸುದ್ದಿ

ಹೊಸಬರಿಗೆ ಇದು ಉತ್ತಮ ಆರಂಭ: 'ತ್ರಿವಿಕ್ರಮ' ಸಿನಿಮಾ ಪ್ರದರ್ಶನದ ಕುರಿತು ವಿಕ್ರಮ್ ರವಿಚಂದ್ರನ್ ಮಾತು

ಕರ್ನಾಟಕದ ಕೆಲವು ಭಾಗಗಳಲ್ಲಿ ಪಾಸಿಟಿವ್ ರೆಸ್ಪಾನ್ಸ್ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಕ್ರೀನ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಯಾವುದೇ ಹೊಸಬರಿಗೆ ಇದೊಂದು ಉತ್ತಮ ಆರಂಭ ಎಂದು ವಿಕ್ರಮ್ ಸಂತಸ ವ್ಯಕ್ತಪಡಿಸಿದ್ದಾರೆ.

ಹೊಸಬರಿಗೆ ಇದು ಉತ್ತಮ ಆರಂಭ: 'ತ್ರಿವಿಕ್ರಮ' ಸಿನಿಮಾ ಪ್ರದರ್ಶನದ ಕುರಿತು ವಿಕ್ರಮ್ ರವಿಚಂದ್ರನ್ ಮಾತು
ತ್ರಿವಿಕ್ರಮ ಸಿನಿಮಾ ಸ್ಟಿಲ್
Published On :

ರವಿಚಂದ್ರನ್ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಚಿತ್ರ ತ್ರಿವಿಕ್ರಮ ಚಿತ್ರಕ್ಕೆ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.  ಸಹನಮೂರ್ತಿ ನಿರ್ದೇಶನದ ರೊಮ್ಯಾಂಟಿಕ್ ಸಿನಿಮಾ ಜೂನ್ 10 ರಂದು ಬಿಡುಗಡೆಯಾಗಿತ್ತು.

ಕರ್ನಾಟಕದ ಕೆಲವು ಭಾಗಗಳಲ್ಲಿ ಪಾಸಿಟಿವ್ ರೆಸ್ಪಾನ್ಸ್ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಕ್ರೀನ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಯಾವುದೇ ಹೊಸಬರಿಗೆ ಇದೊಂದು ಉತ್ತಮ ಆರಂಭ ಎಂದು ಸಂತಸ ವ್ಯಕ್ತಪಡಿಸಿರುವ ವಿಕ್ರಂ, ಕುಟುಂಬ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುವುದನ್ನು ನೋಡುವುದು ಅಪಾರ ಖುಷಿ ತಂದಿದೆ ಎಂದಿದ್ದಾರೆ. ನಾನು ವಿವಿಧ ಥಿಯೇಟರ್‌ಗಳಿಗೆ ಭೇಟಿ ನೀಡುತ್ತಿದ್ದೇನೆ ಮೊದಲ ದಿನವೇ 'ಹೌಸ್‌ಫುಲ್' ಬೋರ್ಡ್‌ಗಳನ್ನು ನೋಡುತ್ತಿರುವುದಕ್ಕೆ ಹಾಗೂ ಶೇ. 60 ಆಕ್ಯುಪೆನ್ಸಿ ಇರುವುದಕ್ಕೆ ವಿಕ್ರಮ್  ಸಂತಸ ವ್ಯಕ್ತ ಪಡಿಸಿದ್ದಾರೆ.

ಗೌರಿ ಎಂಟರ್‌ಟೈನರ್ಸ್ ಅಡಿಯಲ್ಲಿ ಸೋಮಣ್ಣ ನಿರ್ಮಿಸಿದ ತ್ರಿವಿಕ್ರಮ ಚಿತ್ರದ ಮೂಲಕ  ರವಿಚಂದ್ರನ್ ಪುತ್ರ ವಿಕ್ರಮ್ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದರು. ಚಿತ್ರದ ನಾಯಕಿ ಆಕಾಂಕ್ಷಾ ಶರ್ಮಾ ಗೆ ಇದು ಕನ್ನಡದಲ್ಲಿ ಮೊದಲ ಚಿತ್ರವಾಗಿದೆ. ತ್ರಿವಿಕ್ರಮ್ ಬಿಡುಗಡೆಗಾಗಿ ಕಾಯುತ್ತಿದ್ದ ವಿಕ್ರಮ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.