ನಕಲಿ ಫೇಸ್ಬುಕ್ ಖಾತೆ ತೆರೆದು, ಆಶ್ಲೀಲ ಸಂದೇಶ ರವಾನೆ: ಸೈಬರ್ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರಾ ಲೋಕೇಶ್
ಅಪರಿಚಿತ ವ್ಯಕ್ತಿಯೊಬ್ಬರು ತಮ್ಮ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಅನುಚಿತವಾಗಿ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿ ಮೈಸೂರಿನ ಸೈಬರ್ ಕ್ರೈಂ ಠಾಣೆಗೆ ನಟಿ ಪವಿತ್ರಾ ಲೋಕೇಶ್ ಅವರು ದೂರು ನೀಡಿದ್ದಾರೆ.

ಮೈಸೂರು: ಅಪರಿಚಿತ ವ್ಯಕ್ತಿಯೊಬ್ಬರು ತಮ್ಮ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು, ಅನುಚಿತವಾಗಿ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಆರೋಪಿಸಿ ಮೈಸೂರಿನ ಸೈಬರ್ ಕ್ರೈಂ ಠಾಣೆಗೆ ನಟಿ ಪವಿತ್ರಾ ಲೋಕೇಶ್ ಅವರು ದೂರು ನೀಡಿದ್ದಾರೆ.
ದೂರಿನಲ್ಲಿ ಅಪರಿಚಿತ ವ್ಯಕ್ತಿ ನನ್ನ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ಸಂದೇಸಗಳನ್ನು ರವಾವಿಸುತ್ತಿದ್ದಾನೆ. ಅಲ್ಲದೆ, ಸುಳ್ಳು ಸುದ್ದಿಗಳನ್ನು ಹರಡಿ, ಘನತೆಗೆ ಧಕ್ಕೆ ತರುವ ಸಂದೇಶವನ್ನು ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ದೂರು ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಠಾಣೆ ಪೊಲೀಸರು ನಕಲಿ ಖಾತೆ ಮೂಲಕ ಸುಳ್ಳು ಸುದ್ದಿ ಹರಡುತ್ತಿರುವ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


