ಬೆಂಗಳೂರು: ಕೆಜಿಎಫ್ ನಟ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು
ಕೆಜಿಎಫ್ ನಟ ಬಿಎಸ್ ಅವಿನಾಶ್ ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿಗೆ ಅನಿಲ್ ಕುಂಬ್ಳೆ ವೃತ್ತದ ಬಳಿ ಬುಧವಾರ ಕಂಟೈನರ್ ವೊಂದು ಡಿಕ್ಕಿ ಹೊಡೆದೆದಿದ್ದು, ಅಪಘಾತದಲ್ಲಿ ಐಷಾರಾಮಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಬೆಂಗಳೂರು: ಕೆಜಿಎಫ್ ನಟ ಬಿಎಸ್ ಅವಿನಾಶ್ ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿಗೆ ಅನಿಲ್ ಕುಂಬ್ಳೆ ವೃತ್ತದ ಬಳಿ ಬುಧವಾರ ಕಂಟೈನರ್ ವೊಂದು ಡಿಕ್ಕಿ ಹೊಡೆದೆದಿದ್ದು, ಅಪಘಾತದಲ್ಲಿ ಐಷಾರಾಮಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ನಟ ಅವಿನಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪರಿಣಾಮ ಕೆಜಿಎಫ್ ಚಿತ್ರದಲ್ಲಿ ಖಳನಾಯಕನ ಪಾತ್ರ ನಿರ್ವಹಿಸಿದ್ದ ಬಿ.ಎಸ್.ಅವಿನಾಶ್ ಬುಧವಾರ ಬೆಳಗ್ಗೆ ಜಿಮ್ ಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ನಟ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಅಪಘಾತದ ಕುರಿತು ಹೇಳಿಕೆಯನ್ನು ಪೋಸ್ಟ್ ಮಾಡಿರುವ ನಟ, ಕಂಟೈನರ್ ಸಿಗ್ನಲ್ ಅನ್ನು ದಾಟಿ ತಮ್ಮ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿಸಿದ್ದಾರೆ.
ಕಬ್ಬನ್ ಪಾರ್ಕ್ ಟ್ರಾಫಿಕ್ ಪೊಲೀಸರು ಕಂಟೈನರ್ ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 279 ರ ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ.
ಬೆಳಗ್ಗೆ 6.05ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಂಟೈನರ್ ಚಾಲಕನನ್ನು ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅವಿನಾಶ್ ಅವರು ಕೆಜಿಎಫ್ ಚಿತ್ರದಲ್ಲಿ ಆಂಡ್ರ್ಯೂಸ್ ಪಾತ್ರದಲ್ಲಿ ಕಾಣಿಸಿದ್ದು, ಅವರ ಪಾತ್ರಕ್ಕೆ ಎಲ್ಲಡೆ ಉತ್ತಮ ಪ್ರತಿಕ್ರಯೆ ವ್ಯಕ್ತವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


