ಮಿಲನಾ ನಾಗರಾಜ್- ಪೃಥ್ವಿ ಅಂಬರ್ ನಟನೆಯ ‘ಫಾರ್ ರಿಜಿಸ್ಟ್ರೇಷನ್’ ರಿಲೀಸ್ ಡೇಟ್ ಫಿಕ್ಸ್!
ನಟಿ ಮಿಲನಾ ನಾಗರಾಜ್ ಮತ್ತು ದಿಯಾ ಖ್ಯಾತಿಯ ಪೃಥ್ವಿ ಅಂಬರ್ ನಟನೆಯ ಫಾರ್ ರಿಜಿಸ್ಟ್ರೇಷನ್ ಸಿನಿಮಾ ರಿಲೀಸ್ ಮಾಡಲು ದಿನಾಂಕ ಫಿಕ್ಸ್ ಮಾಡಲಾಗಿದೆ.

ನಟಿ ಮಿಲನಾ ನಾಗರಾಜ್ ಮತ್ತು ದಿಯಾ ಖ್ಯಾತಿಯ ಪೃಥ್ವಿ ಅಂಬರ್ ನಟನೆಯ ಫಾರ್ ರಿಜಿಸ್ಟ್ರೇಷನ್ ಸಿನಿಮಾ ರಿಲೀಸ್ ಮಾಡಲು ದಿನಾಂಕ ಫಿಕ್ಸ್ ಮಾಡಲಾಗಿದೆ.
ನವೀನ್ ದ್ವಾರಕಾನಾಥ್ ನಿರ್ದೇಶನದ ರೋಮ್ಯಾಂಟಿಕ್ ಸಿನಿಮಾ ‘ಫಾರ್ ರಿಜಿಸ್ಟ್ರೇಷನ್’ (For Regn) ಫೆಬ್ರವರಿ ತಿಂಗಳಲ್ಲೇ ರಿಲೀಸ್ ಆಗುತ್ತಿರುವುದು ವಿಶೇಷ. 2023ರ ಫೆ.10ರಂದು ಈ ಸಿನಿಮಾ ತೆರೆಕಾಣಲಿದೆ. ನವೆಂಬರ್ 1 ರಂದು ಸಿನಿಮಾದ ಫರ್ಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.
ಸಾಫ್ಟ್ ವೇರ್ ಎಂಜಿನೀಯರ್ ಆಗಿದ್ದ ನವೀನ್ ಈ ಹಿಂದೆ ನೆರಳು, ಹರಿವಿನ ಹಾದಿ ಮತ್ತು ಹಳದಿ ಬೋರ್ಡ್‌ನಂತಹ ಸಾಕ್ಷ್ಯಚಿತ್ರಗಳು ಮತ್ತು ಕಿರುಚಿತ್ರಗಳನ್ನು ಮಾಡಿದ್ದಾರೆ. ಅವರು ಫಾರ್ ರಿಜಿಸ್ಟ್ರೇಷನ್ ಚಿತ್ರದ ಮೂಲಕ ಮಾದಲ ಬಾರಿಗೆ ಸಿನಿಮಾ ನಿರ್ದೇಶಕರಾಗಿದ್ದಾರೆ.
ನನ್ನ ಸ್ನೇಹಿತ ಮತ್ತು ನಿರ್ಮಾಪಕ ನವೀನ್ ರಾವ್ ನಾನು ಸಿನಿಮಾ ರಂಗಕ್ಕೆ ಬರಲು ಪ್ರೋತ್ಸಾಹಿಸಿದರು. ಪೃಥ್ವಿ ಮತ್ತು ಮಿಲನಾ ಆಯ್ಕೆ ಮಾಡಿಕೊಂಡಿದ್ದಕ್ಕೆ ನನಗೆ ಖುಷಿಯಾಗಿದೆ. ಚಿತ್ರವು ಉತ್ತಮವಾಗಿ ರೂಪುಗೊಂಡಿದೆ ಮತ್ತು ಈಗ ಅದು ಬಿಡುಗಡೆಯ ಹಂತಕ್ಕೆ ಬಂದಿದೆ ಎಂದು ನಿರ್ದೇಶಕ ನವೀನ್ ದ್ವಾರಕನಾಥ್ ತಿಳಿಸಿದ್ದಾರೆ.
ಈ ಚಿತ್ರದಲ್ಲಿ ತಬಲಾ ನಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಖ್ಯಾತ ಹಿರಿಯ ತುಳು ಹಾಸ್ಯನಟ ಅರವಿಂದ ಬೋಳಾರ್ ನಟಿಸಿದ್ದಾರೆ. ಸಿನಿಮಾದಲ್ಲಿ ಸುಧಾರಾಣಿ, ಬಾಬು ಹಿರಣ್ಣಯ್ಯ ಮತ್ತು ಸುಧಾ ಬೆಳವಾಡಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಹರೀಶ ಆರ್ ಸಂಗೀತ ಸಂಯೋಜಿಸಿದ್ದು, ವಿವೇಕ್ ಎಸ್ ಕೆ ಅವರ ಛಾಯಾಗ್ರಹಣವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


