ಸಿನಿಮಾ ಸುದ್ದಿ

ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ: ನಾಳೆಯಿಂದ ಗಂಧದ ಗುಡಿ ಚಿತ್ರದ ಟಿಕೆಟ್ ದರ ಇಳಿಕೆ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಸೋಮವಾರದಿಂದ ಗುರುವಾರದವರೆಗೆ ಗಂಧದ ಗುಡಿ ಸಾಕ್ಷ್ಯ ಚಿತ್ರದ ಟಿಕೆಟ್ ದರ ಇಳಿಕೆ ಮಾಡಿದ್ದಾರೆ.

ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ: ನಾಳೆಯಿಂದ ಗಂಧದ ಗುಡಿ ಚಿತ್ರದ ಟಿಕೆಟ್ ದರ ಇಳಿಕೆ
ಗಂಧದ ಗುಡಿ ಚಿತ್ರದ ಪೋಸ್ಟರ್
Published On :

ಬೆಂಗಳೂರು: ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಸೋಮವಾರದಿಂದ ಗುರುವಾರದವರೆಗೆ ಗಂಧದ ಗುಡಿ ಸಾಕ್ಷ್ಯ ಚಿತ್ರದ ಟಿಕೆಟ್ ದರ ಇಳಿಕೆ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಮೂಲಕ ಈ ಬಗ್ಗೆ ಮಾಹಿತಿ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು, ಗಂಧದ ಗುಡಿ ಅಪ್ಪು ಅವರ ಒಂದು ಕನಸು. ಕರ್ನಾಟಕದ ವನ್ಯ ಸಂಪತ್ತು ಹಾಗೂ ಪ್ರಕೃತಿ ಸೌಂದರ್ಯವನ್ನು ಕನ್ನಡಿಗರಿಗೆ ಪರಿಚಯಿಸುವ ಅವರ ಹಂಬಲ ಈ ಸಿನಿಮಾ ರೂಪಗೊಳ್ಳಲು ಕಾರಣ. ಈ ಸಿನಿಮಾ ಎಲ್ಲಾ ಕನ್ನಡಿಗರು ಅದರಲ್ಲೂ ಮಕ್ಕಳು ನೋಡಬೇಕು ಎಂಬುದು ಅಪ್ಪು ಉದ್ದೇಶವಾಗಿತ್ತು. ಹೀಗಾಗಿ ಗಂಧದ ಗುಡಿ ಚಿತ್ರದ ಟಿಕೆಟ್ ದರವನ್ನು 7-11-2022 ರಿಂದ 10-11-2022ರ ವರೆಗೆ ಚಿತ್ರಮಂದಿರಗಳಲ್ಲಿ 56 ರೂಪಾಯಿ ಹಾಗೂ ಮಲ್ಟಿಪ್ಲೆಕ್ಸ್ ಗಳಲ್ಲಿ 112 ರೂಪಾಯಿಗೆ ಇಳಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯಾದ್ಯಂತ ದಿನದ ಎಲ್ಲಾ ಆಟಗಳು ಪ್ರದರ್ಶನ ಮಾಡಬೇಕು ಎಂದು ನಿರ್ಧಾರ ಮಾಡಿರುವುದಾಗಿ ಅಶ್ವಿನಿ ಪುನೀರ್ ರಾಜ್ ಕುಮಾರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.