ಸಿನಿಮಾ ಸುದ್ದಿ

ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ ಮುರಳಿಕೃಷ್ಣ ನಿಧನ

ಹಿಂದಿಯ ಹಾಸ್ಯ ಕಲಾವಿದ ಜಾನಿ ಲಿವರ್ ಅವರನ್ನು ಕನ್ನಡ ಸಿನಿಮಾ ರಂಗಕ್ಕೆ ಪರಿಚಯಿಸಿದ ನಿರ್ದೇಶಕ, ನಿರ್ಮಾಪಕ ಕೆ.ಆರ್. ಮುರಳಿ ಕೃಷ್ಣ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.

ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ ಮುರಳಿಕೃಷ್ಣ ನಿಧನ
ಸ್ಯಾಂಡಲ್ ವುಡ್ ನಿರ್ದೇಶಕ ಮುರಳಿಕೃಷ್ಣ(ಸಂಗ್ರಹ ಚಿತ್ರ)
Published On :

ಬೆಂಗಳೂರು: ಹಿಂದಿಯ ಹಾಸ್ಯ ಕಲಾವಿದ ಜಾನಿ ಲಿವರ್ ಅವರನ್ನು ಕನ್ನಡ ಸಿನಿಮಾ ರಂಗಕ್ಕೆ ಪರಿಚಯಿಸಿದ ನಿರ್ದೇಶಕ, ನಿರ್ಮಾಪಕ ಕೆ.ಆರ್. ಮುರಳಿ ಕೃಷ್ಣ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. 

ಮುರಳಿಕೃಷ್ಣ ಅವರು ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದರು. ಸಣ್ಣ ಸತ್ಯ, ಗರ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಗರ ಸಿನಿಮಾದ ಮೂಲಕ ಬಾಲಿವುಡ್ ನ ಖ್ಯಾತ ಹಾಸ್ಯ ಕಲಾವಿದ ಜಾನಿ ಲಿವರ್ ಅವರನ್ನು ಕನ್ನಡ ಸಿನಿಮಾ ರಂಗಕ್ಕೆ ಪರಿಚಯಿಸಿದ್ದರು. ಈ ಸಿನಿಮಾ ಇನ್ನೂ ಬಿಡುಗಡೆಯಾಗಿಲ್ಲ. 

ಬ್ರೈನ್ ಟೂಮರ್ ಇರುವುದು ಪತ್ತೆಯಾದ ನಂತರ ಶಸ್ತ್ರ ಚಿಕಿತ್ಸೆಗಾಗಿ ಕೂಡಲೇ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರ ಚಿಕಿತ್ಸೆ ಫಲಕಾರಿಯಾದರೂ, ನಿನ್ನೆ ತೀವ್ರ ಹೃದಯಾಘಾತದಿಂದ ನಿನ್ನೆ ಸಂಜೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

ವೃತ್ತಿಯಲ್ಲಿ ವಕೀಲರಾಗಿದ್ದ ಮುರಳಿಕೃಷ್ಣ ಪ್ರವೃತ್ತಿಯಲ್ಲಿ ಸಿನಿಮಾ ನಿರ್ದೇಶಕರಾಗಿ, ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ ಸಿನಿಮಾಗಳನ್ನು ನಿರ್ಮಿಸಿದ್ದಾರೆ. 

ಬೆಂಗಳೂರಿನ ಸಹಕಾರ ನಗರದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಇಂದು ಮಧ್ಯಾಹ್ನ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇವರು ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.