'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರೀಕರಣ ಪೂರ್ಣಗೊಳಿಸಿದ ರಾಜ್ ಬಿ ಶೆಟ್ಟಿ
ಒಂದು ಮೊಟ್ಟೆಯ ಕಥೆ ಮತ್ತು ಗರುಡ ಗಮನ ವೃಷಭ ವಾಹನದ ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು ತಮ್ಮ ಮೂರನೇ ನಿರ್ದೇಶನದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.

ಒಂದು ಮೊಟ್ಟೆಯ ಕಥೆ ಮತ್ತು ಗರುಡ ಗಮನ ವೃಷಭ ವಾಹನದ ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು ತಮ್ಮ ಮೂರನೇ ನಿರ್ದೇಶನದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ.
ಚಿತ್ರೀಕರಣ ಪೂರ್ಣಗೊಂಡಿರುವ ಬಗ್ಗೆ ಅಧಿಕೃತ ಪೋಸ್ಟ್ ಅನ್ನು ಪ್ರೊಡಕ್ಷನ್ ಹೌಸ್, ಆಪಲ್ ಬಾಕ್ಸ್ ಸ್ಟುಡಿಯೋಸ್ ಪೋಸ್ಟ್ ಮಾಡಿದೆ.

ಸ್ವಾತಿ ಮುತ್ತಿನ ಮಳೆ ಹನಿಯೇ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಅವರ ಕಮ್ ಬ್ಯಾಕ್ ಚಿತ್ರವಾಗಬೇಕಿತ್ತು, ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಚಿತ್ರ ನಿರ್ಮಿಸಲು ರಮ್ಯಾ ಅವರು ನಿರ್ಧರಿಸಿದರು. ನಂತರ ಚಿತ್ರಕ್ಕೆ ನಟಿಯಾಗಿ ಸಿರಿ ರವಿಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು. ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆ.
ಊಟಿ ಮತ್ತು ಮೈಸೂರು ಭಾಗಗಳಲ್ಲಿ ಚಿತ್ರದ ಚಿತ್ರೀಕರಣವನ್ನು ಮಾಡಲಾಯಿತು. 18 ದಿನಗಳ ಒಂದೇ ಶೆಡ್ಯೂಲ್ನಲ್ಲಿ ಚಿತ್ರೀಕರಣ ಮಾಡಲಾಗಿದೆ. “ನಾವು ಸರಳವಾದ ಸ್ಥಳಗಳಲ್ಲಿಯೇ ಚಿತ್ರೀಕರಣ ನಡೆಸಲಾಗಿದ್ದು, ಹೀಗಾಗಿಯೇ ಅತ್ಯಂತ ಕಡಿಮೆ ಸ್ಥಳದಲ್ಲಿ ಚಿತ್ರೀಕರಣ ಪೂರ್ಣಗೊಳಿಸಲು ಸಾಧ್ಯವಾಯಿತು. ಸಮಸ್ಯೆಗಳು, ಗೊಂದಲಗಳಿದ್ದರೂ ನಾನು ಇಷ್ಟಪಟ್ಟ ಕೆಲಸವನ್ನು ನಾನು ಮಾಡಬಲ್ಲೆ ಎಂಬುದನ್ನು ಈ ಚಿತ್ರದ ಚಿತ್ರೀಕರಣದಲ್ಲಿ ತಿಳಿದುಕೊಂಡೆ ಎಂದು ರಾಜ್ ಬಿ ಶೆಟ್ಟಿಯವರು ಹೇಳಿದ್ದಾರೆ.
ಇದೇ ವೇಳೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದಲ್ಲಿ ಅಸಾಧಾರಣ ಅಭಿನಯವನ್ನು ನೀಡಿದ್ದಕ್ಕಾಗಿ ಸಿರಿ ರವಿಕುಮಾರ್ ಅವರನ್ನು ಶ್ಲಾಘಿಸಿದ್ದಾರೆ.
ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರ ಇದೀಗ ಪೋಸ್ಟ್-ಪ್ರೊಡಕ್ಷನ್ಗೆ ಹೋಗಲಿದೆ, ಚಿತ್ರಕ್ಕೆ ಒಟಿಟಿಯಲ್ಲಿ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುವ ನಂಬಿಕೆಯಿದೆ. ನೇರವಾಗಿ ಡಿಜಿಟಲ್ ಬಿಡುಗಡೆಗೆ ಹೋಗುವ ಕುರಿತು ಎಂದು ಪ್ರೊಡಕ್ಷನ್ ಹೌಸ್ನಿಂದ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಚಿತ್ರದಲ್ಲಿ ರಾಜ್ ಮತ್ತು ಸಿರಿ ಅವರಲ್ಲದೆ, ಬಾಲಾಜಿ ಮನೋಹರ್, ಸೂರ್ಯ ವಸಿಷ್ಟ, ಮತ್ತು ರೇಖಾ ಕೂಡ್ಲಿಗಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಮಿಧುನ್ ಮುಕುಂದನ್ ಅವರ ಸಂಗೀತ ಮತ್ತು ಪ್ರವೀಣ್ ಶ್ರೀಯಾನ್ ಅವರ ಛಾಯಾಗ್ರಹಣವಿದೆ.
ಇದನ್ನೂ ಓದಿ: ಇದನ್ನೂ ಓದಿ: ರಾಜ್ ಬಿ. ಶೆಟ್ಟಿ ಸಿನಿಮಾದಿಂದ ರಮ್ಯಾ ಔಟ್: ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಮತ್ತೋರ್ವ ನಟಿ ಎಂಟ್ರಿ! ಮೋಹಕ ತಾರೆ ಫ್ಯಾನ್ಸ್ ಗೆ ನಿರಾಸೆ
ಏತನ್ಮಧ್ಯೆ, ರಾಜ್ ಬಿ ಶೆಟ್ಟಿ ಅವರು ಫೆಬ್ರವರಿಯಲ್ಲಿ ಜಿಶೋ ಲೋನ್ ಆಂಥೋನಿ ಅವರ ಮಲಯಾಳಂ ಚೊಚ್ಚಲ ನಿರ್ದೇಶನದ ರುಧಿರಾಮ್ ಚಿತ್ರೀಕರಣವನ್ನು ಆರಂಭಿಸಲು ಚಿಂತನೆ ನಡೆಸಿದ್ದಾರೆ.
ಇನ್ನು ನಟಿ ರಮ್ಯಾ ಅವರು ರೋಹಿತ್ ಪದಕಿ ಅವರ ಉತ್ತರಕಾಂಡ ಚಿತ್ರದ ಮೂಲಕ ಸ್ಯಾಂಡಲ್ ವುಡ್'ಗೆ ಕಮ್ ಬ್ಯಾಕ್ ಆಗುತ್ತಿದ್ದು, ಚಿತ್ರದಲ್ಲಿ ಧನಂಜಯ್ ನಾಯಕ ನಟನಾಗಿ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


