ಸಿನಿಮಾ ಸುದ್ದಿ

'ರಹಸ್ಯ' ನಟಿಯ ಆಡಿಯೋ ವೈರಲ್: ವೈಷ್ಣವಿ ಗೌಡ ಜೊತೆಗಿನ ನಿಶ್ಚಿತಾರ್ಥ ವಿಚಾರ; ವಿದ್ಯಾಭರಣ್ ಪ್ರತಿಕ್ರಿಯೆ

ನಾನು ವೈಷ್ಣವಿ ಇನ್ನೂ ಪರಸ್ಪರ ಮಾತನಾಡಿಲ್ಲ, ನಿಶ್ಚಿತಾರ್ಥ ನಡೆದಿಲ್ಲ ಎಂದು ವಿದ್ಯಾಭರಣ್ ಖಾಸಗಿ ಚಾನೆಲ್ ಗಳಿಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ವೈರಲ್ ಆದ ಫೋಟೋ ಬಗ್ಗೆ ಹುಟ್ಟಿಕೊಂಡ ಅನುಮಾನಕ್ಕೆ ಸ್ಪಷ್ಟಣೆ ನೀಡಿದ್ದಾರೆ.

'ರಹಸ್ಯ' ನಟಿಯ ಆಡಿಯೋ ವೈರಲ್: ವೈಷ್ಣವಿ ಗೌಡ ಜೊತೆಗಿನ ನಿಶ್ಚಿತಾರ್ಥ ವಿಚಾರ; ವಿದ್ಯಾಭರಣ್ ಪ್ರತಿಕ್ರಿಯೆ
ವಿದ್ಯಾಭರಣ್
Published On :

ಇತ್ತೀಚೆಗೆ ಕಿರುತೆರೆ ನಟಿ ವೈಷ್ಣವಿ ಗೌಡ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾದ ಫೋಟೋ ಒಂದು ವೈರಲ್ ಆಗಿತ್ತು. ಉದ್ಯಮಿ ವಿದ್ಯಾಭರಣ್ ಜತೆ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಈಗ ವಿದ್ಯಾಭರಣ್  ಸ್ಪಷ್ಟನೆ ನೀಡಿದ್ದಾರೆ.

‘ನಾನು ವೈಷ್ಣವಿ ಇನ್ನೂ ಪರಸ್ಪರ ಮಾತನಾಡಿಲ್ಲ, ನಿಶ್ಚಿತಾರ್ಥ ನಡೆದಿಲ್ಲ ಎಂದು ವಿದ್ಯಾಭರಣ್ ಖಾಸಗಿ ಚಾನೆಲ್ ಗಳಿಗೆ ಮಾಹಿತಿ ನೀಡಿದ್ದಾರೆ. ಈ ಮೂಲಕ ವೈರಲ್ ಆದ ಫೋಟೋ ಬಗ್ಗೆ ಹುಟ್ಟಿಕೊಂಡ ಅನುಮಾನಕ್ಕೆ ಸ್ಪಷ್ಟಣೆ ನೀಡಿದ್ದಾರೆ.

ವೈಷ್ಣವಿ ಜೊತೆಗೆ ನನ್ನ ನಿಶ್ಚಿತಾರ್ಥ ನಡೆದಿಲ್ಲ. ಎರಡು ಕುಟುಂಬದ ನಡುವೆ ಪ್ರಾಥಮಿಕ ಮಾತುಕತೆಯಾಗಿತ್ತು. ಆದರೆ ಈ ಫೋಟೋ ಎಲ್ಲಿಂದ ವೈರಲ್ ಆಯಿತು ಎನ್ನುವುದು ಗೊತ್ತಿಲ್ಲ. ನಮ್ಮ ಕುಟುಂಬದವರ ವರ್ಚಸ್ಸನ್ನು ಹಾಳು ಮಾಡಲು ಪ್ಲಾನ್ ಮಾಡಿದ್ದಾರೆ.

ನಾನು ಯಾವುದೇ ಹುಡುಗಿಯರೊಂದಿಗೆ ತಪ್ಪಾಗಿ ನಡೆದುಕೊಂಡಿಲ್ಲ. ಆಕೆ ನೇರವಾಗಿ ಬಂದು ಆರೋಪವನ್ನು ಮಾಡಬಹುದಿತ್ತು. ನನ್ನ ಮೊದಲ ಫಿಲ್ಮ್ ಬಂದಾಗಲೇ ಇವರು ಆರೋಪ ಮಾಡಬಹುದಿತ್ತು. ಹೆಸರು ಹೇಳಲು ಧೈರ್ಯವಿಲ್ಲದಿರುವ ಆಕೆ ಆರೋಪ ಮಾಡುತ್ತಿದ್ದಾಳೆ ಎಂದು ಕಿಡಿಕಾರಿದ್ದಾರೆ.

ನಾಳೆ ಕಮೀಷನರ್ ಅವರಿಗೆ ದೂರು ನೀಡುತ್ತೇನೆ. ನನ್ನ ಮೇಲೆ ಇಷ್ಟೆಲ್ಲ ಆರೋಪ ಮಾಡುವ ಬದಲು ಆಕೆಯೇ ಕಂಪ್ಲೆಂಟ್ ಕೊಡಬಹುದಿತ್ತು. ನಮ್ಮ ಏಳಿಗೆಯನ್ನು ಸಹಿಸಲು ಸಾಧ್ಯವಾಗದೇ ಇರುವ ಹಿತಶತ್ರುಗಳು ಹೀಗೆ ಮಾಡುತ್ತಿದ್ದಾರೆ. ನಾನು ಇನ್‍ಸ್ಟಾಗ್ರಾಮ್ ಅನ್ನು ಮೊದಲೇ ಡಿಲೀಟ್ ಮಾಡಿದ್ದೇನೆ. ನನ್ನ ಇನ್‍ಸ್ಟಾಗ್ರಾಮ್ ಹ್ಯಾಕ್ ಆಗಿತ್ತು. ತುಂಬಾ ಹಿಂದೆಯೇ ಡಿಲೀಟ್ ಆಗಿದೆ. ಇಂತಹ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

‘ಈ ಹಿಂದೆ ನನಗೆ ಗರ್ಲ್​​ಫ್ರೆಂಡ್ ಇದ್ದಿದ್ದು ನಿಜ. ಇದು ಗೊತ್ತಿರುವ ವಿಚಾರ. ನಾನು ಯಾವುದೇ ಹುಡುಗಿಯೊಂದಿಗೆ ತಪ್ಪಾಗಿ ನಡೆದುಕೊಂಡಿಲ್ಲ. ಆಡಿಯೋದಲ್ಲಿ ನನ್ನ ಬಗ್ಗೆ ಯುವತಿಯೊಬ್ಬರು ಮಾತನಾಡಿದ್ದಾರೆ. ಆಕೆ ನೇರವಾಗಿಯೇ ಬಂದು ಆರೋಪ ಮಾಡಬಹುದಿತ್ತು. ಆರೋಪ ಮಾಡುವ ಬದಲು ನನ್ನ ವಿರುದ್ಧ ದೂರು ಕೊಡಬಹುದಿತ್ತು. ನಮ್ಮ ಕುಟುಂಬದ ವರ್ಚಸ್ಸು ಹಾಳು ಮಾಡುವ ಪ್ರಯತ್ನ ನಡೆದಿದೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.