ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ 'ಯುಐ' ಚಿತದಲ್ಲಿ ನಟಿ ಸನ್ನಿ ಲಿಯೋನ್?
ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸುತ್ತಿರುವ ‘ಯುಐ’ ಚಿತ್ರದ ಚಿತ್ರೀಕರಣ ಸದ್ದಿಲ್ಲದೇ ನಡೆಯುತ್ತಿದ್ದು, ಅನೇಕ ತಾರಾಗಣ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ, ಯಾವುದೇ ಪಾತ್ರವರ್ಗದ ಕುರಿತು ನಿರ್ಮಾಪಕರು ಮಾಹಿತಿ ಹೊರಬಿಟ್ಟಿಲ್ಲ.

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸುತ್ತಿರುವ ‘ಯುಐ’ ಚಿತ್ರದ ಚಿತ್ರೀಕರಣ ಸದ್ದಿಲ್ಲದೇ ನಡೆಯುತ್ತಿದ್ದು, ಅನೇಕ ತಾರಾಗಣ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ, ಯಾವುದೇ ಪಾತ್ರವರ್ಗದ ಕುರಿತು ನಿರ್ಮಾಪಕರು ಮಾಹಿತಿ ಹೊರಬಿಟ್ಟಿಲ್ಲ.
ವರದಿಗಳ ಪ್ರಕಾರ, ನಿಧಿ ಸುಬಯ್ಯ, ಇಂದ್ರಜಿತ್ ಲಂಕೇಶ್, ಪ್ರಶಾಂತ್ ಸಂಬರ್ಗಿ ಮತ್ತು ಓಂ ಸಾಯಿಪ್ರಕಾಶ್ ಅವರು ಅತಿಥಿ ಪಾತ್ರಗಳಲ್ಲಿ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.
ಇದೀಗ ಈ ಚಿತ್ರದಲ್ಲಿ ನಟಿ ಸನ್ನಿ ಲಿಯೋನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ಮಾತುಗಳು ಕೇಳಿಬಂದಿವೆ.
ಡಿಕೆ ಮತ್ತು ಚಾಂಪಿಯನ್‌ನಂತಹ ಚಿತ್ರಗಳಲ್ಲಿ ಐಟಂ ಸಾಂಗ್ ಗಳಲ್ಲಿ ಕಾಣಿಸಿಕೊಂಡಿದ್ದ ಸನ್ನಿ ಲಿಯೋನ್, ಯುಐ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಚಿತ್ರ ತಂಡ ಮಾತ್ರ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.
ಹಲವು ವರ್ಷಗಳ ನಂತರ ಉಪೇಂದ್ರ ಮತ್ತೆ ನಿರ್ದೇಶನ ಮಾಡುತ್ತಿದ್ದು, ಅಪರೂಪದ ಕಥೆಯೊಂದನ್ನು ಈ ಚಿತ್ರಕ್ಕಾಗಿ ಹೆಣೆದಿದ್ದಾರೆ. ನೂರಕ್ಕೂ ಹೆಚ್ಚು ಕಲಾವಿದರು ಈ ಸಿನಿಮಾದಲ್ಲಿ ಇರುವುದು ಚಿತ್ರದ ವಿಶೇಷವಾಗಿದೆ. ಈಗಾಗಲೇ ಸಿನಿಮಾದ ಪೋಸ್ಟರ್, ಫಸ್ಟ್ ಲುಕ್ ಕೂಡ ರಿಲೀಸ್ ಆಗಿದ್ದು, ಸಾಕಷ್ಟು ಕುತೂಹಲ ಕೂಡ ಮೂಡಿಸಿದೆ.
ಯುಐ ಉಪ್ಪಿಯ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಕೆಜಿಎಫ್, ವಿಕ್ರಾಂತ್ ರೋಣ ಖ್ಯಾತಿಯ ಶಿವಕುಮಾರ್ ಕಲಾ ನಿರ್ದೇಶನ ಈ ಸಿನಿಮಾಕ್ಕಿದೆ. ಬಿಗ್ ಬಜೆಟ್‌ನಲ್ಲಿ ಸಿದ್ಧವಾಗುತ್ತಿರುವ ಸಿನಿಮಾ ಇದಾಗಿದ್ದು, ಟಗರು, ಸಲಗ ಖ್ಯಾತಿಯ ಕೆಪಿ ಶ್ರೀಕಾಂತ್ ಹಾಗೂ ಲಹರಿ ಸಂಸ್ಥೆ ಸಿನಿಮಾ ನಿರ್ಮಾಣ ಮಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


