ಪತಿ ಸತ್ತು ವರ್ಷ ತುಂಬುವುದರೊಳಗೆ ಎರಡನೇ ವಿವಾಹಕ್ಕೆ ಮೀನಾ ಸಜ್ಜು! ಕುಟುಂಬಸ್ಥರ ಒತ್ತಡಕ್ಕೆ ಮಣಿದರಾ ಬಹುಭಾಷಾ ನಟಿ?
ಬಹುಭಾಷಾ ನಟಿ ಮೀನಾ ಎರಡನೇ ಮದುವೆಗೆ ಸಜ್ಜಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿದೆ. ಅವರ ಕುಟುಂಬದಿಂದಲೇ ಮೀನಾ ಅವರಿಗೆ ಎರಡನೇ ಮದುವೆಯಾಗು ಎಂಬ ಒತ್ತಡ ಶುರುವಾಗಿದೆ. ಹೀಗಾಗಿ ಅವರು ಎರಡನೇ ಮದುವೆಗೆ ತಯಾರಾಗಿದ್ದಾರೆ ಎನ್ನಲಾಗಿದೆ.

ಬಹುಭಾಷಾ ನಟಿ ಮೀನಾ ಎರಡನೇ ಮದುವೆಗೆ ಸಜ್ಜಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ವೈರಲ್ ಆಗುತ್ತಿದೆ. ಅವರ ಕುಟುಂಬದಿಂದಲೇ ಮೀನಾ ಅವರಿಗೆ ಎರಡನೇ ಮದುವೆಯಾಗು ಎಂಬ ಒತ್ತಡ ಶುರುವಾಗಿದೆ. ಹೀಗಾಗಿ ಅವರು ಎರಡನೇ ಮದುವೆಗೆ ತಯಾರಾಗಿದ್ದಾರೆ ಎನ್ನಲಾಗಿದೆ.
2009ರಲ್ಲಿ ನಟಿ ಮೀನಾ ಸಾಫ್ಟ್‌ವೇರ್ ಇಂಜಿನಿಯರ್ ವಿದ್ಯಾಸಾಗರ್ ಅವರನ್ನು ವರಿಸಿದ್ದರು. ವಿವಾಹದ ಬಳಿಕ ವಿದ್ಯಾಸಾಗರ್ ಮತ್ತು ಮೀನಾ ಚೆನ್ನೈನಲ್ಲಿ ವಾಸ್ತವ್ಯ ಹೂಡಿದ್ದರು. ಕಳೆದ ಜೂನ್ನಲ್ಲಿ ಪತಿ ವಿದ್ಯಾ ಸಾಗರ್ ಕೊರೊನೋತ್ತರ ಸಮಸ್ಯೆಗಳಿಂದ ಸಾವನ್ನಪ್ಪಿದ್ದರು.
ಈ ದಂಪತಿಗೆ 11 ವರ್ಷದ ನೈನಿಕಾ ಎಂಬ ಮಗಳಿದ್ದಾಳೆ. ತಾಯಿಯ ಹಾದಿಯನ್ನ ಅನುಸರಿಸಿರುವ ನೈನಿಕಾ ‘ತೇರಿ’ ಎಂಬ ಚಿತ್ರದಲ್ಲಿ ಬಾಲನಟಿಯಾಗಿ ತೆರೆಯ ಮೇಲೆ ಪದಾರ್ಪಣೆ ಮಾಡಿದ್ದಾರೆ. ಇನ್ನೂ ಪತಿ ಕಳೆದುಕೊಂಡ ಕಹಿ ಸತ್ಯವನ್ನು ಒಪ್ಪಿಕೊಳ್ಳುತ್ತಿರುವ ಮೀನಾ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದ್ದಾರೆ.
ಹೊಸ ಸಿನಿಮಾದಲ್ಲಿ ನಟಿಸುತ್ತಿರುವ ಮೀನಾ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದು, ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ತಮ್ಮ ಕುಟುಂಬದ ಸ್ನೇಹಿತರೊಬ್ಬರನ್ನ ಮರು ವಿವಾಹ ಮಾಡಿಕೊಳ್ಳುವಂತೆ ಪೋಷಕರು ಒತ್ತಡ ಹೇರುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


