ಸಿನಿಮಾ ಸುದ್ದಿ

ಸಿನಿಮಾ ಆಗುತ್ತಿದೆ ರಕ್ಷಿತ್ ತೀರ್ಥಹಳ್ಳಿ ಅವರ 'ಕಾಡಿನ ನೆಂಟರು' ಕಾದಂಬರಿ!

ಶ್ರೀ ಕೃಷ್ಣ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗೆ ರಕ್ಷಿತ್ ತೀರ್ಥಹಳ್ಳಿ ಬರೆದಿರುವ ಕಾಡಿನ ನೆಂಟರು ಎಂಬ ಕಾದಂಬರಿಯಿಂದ ಕಥೆ ಆರಿಸಿಕೊಳ್ಳಲಾಗಿದೆ. ಸಿನಿಮಾಗೆ ತಿಮ್ಮನ ಮೊಟ್ಟೆಗಳು ಎಂದು ಟೈಟಲ್ ಇಡಲಾಗಿದೆ.

ಸಿನಿಮಾ ಆಗುತ್ತಿದೆ ರಕ್ಷಿತ್ ತೀರ್ಥಹಳ್ಳಿ ಅವರ 'ಕಾಡಿನ ನೆಂಟರು' ಕಾದಂಬರಿ!
ತಿಮ್ಮನ ಮೊಟ್ಟೆಗಳು ಚಿತ್ರತಂಡ
Published On :

ಆದರ್ಶ್ ಅಯ್ಯಂಗಾರ್ ಚೊಚ್ಚಲ ನಿರ್ಮಾಣ ಸಿನಿಮಾಗೆ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನ ಮಾಡಲಿದ್ದಾರೆ.

ಶ್ರೀ ಕೃಷ್ಣ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾಗೆ ರಕ್ಷಿತ್ ತೀರ್ಥಹಳ್ಳಿ ಬರೆದಿರುವ ಕಾಡಿನ ನೆಂಟರು ಎಂಬ ಕಾದಂಬರಿಯಿಂದ ಕಥೆ ಆರಿಸಿಕೊಳ್ಳಲಾಗಿದೆ. ಸಿನಿಮಾಗೆ ತಿಮ್ಮನ ಮೊಟ್ಟೆಗಳು ಎಂದು ಟೈಟಲ್ ಇಡಲಾಗಿದ್ದು, ಮುಂದಿನ 15 ದಿನಗಳಲ್ಲಿ ಶೂಟಿಂಗ್ ಆರಂಭವಾಗಲಿದೆ.

ಈ ಹಿಂದೆ ನಾನು, ರಕ್ಷಿತ್ ಹಾಗೂ ಹೇಮಂತ್ ಜೋಯಿಸ್ ಜೊತೆಗೂಡಿ ಕೆಲವು ವಿಡಿಯೋ ಸಾಂಗ್ ಗಳನ್ನು ಬಿಡುಗಡೆ ಮಾಡಿದ್ದೆವು. ಈ ಹಾಡುಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನ ಕೂಡ ಮಾಡಲಾಗಿತ್ತು. ಈಗ ನಾನು ಆರಂಭಿಸಿರುವ ಶ್ರೀಕೃಷ್ಣ ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆ ಮೂಲಕ ಸದಭಿರುಚಿ ಚಿತ್ರಗಳನ್ನು ನಿರ್ಮಿಸಬೇಕೆಂಬ ಉದ್ದೇಶದಿಂದ ಮೊದಲ ಚಿತ್ರವಾಗಿ “ತಿಮ್ಮನ ಮೊಟ್ಟೆಗಳು” ಚಿತ್ರವನ್ನು ನಿರ್ಮಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಆದರ್ಶ್ ಅಯ್ಯಂಗಾರ್ ಹೇಳಿದ್ದಾರೆ.

ನನ್ನ ಎಲ್ಲಾ ಚಿತ್ರಗಳಲ್ಲೂ ಪಶ್ಚಿಮ ಘಟ್ಟದ ಜೀವನ ಶೈಲಿಯ ಮೇಲೆ ಬೆಳಕು ಚೆಲ್ಲಲಾಗುತ್ತೆ. ಇಲ್ಲಿಯೂ ಸಹ ಹೊಸ ವಿಷಯವನ್ನು ಹೇಳ ಹೊರಟಿದ್ದೇನೆ. ಸದ್ಯದಲ್ಲೇ ಚಿತ್ರೀಕರಣ ಆರಂಭಿಸುತ್ತೇವೆ ಎಂದು ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.