ಶಿವರಾಜ್ ಕುಮಾರ್ ನಟನೆಯ 'ಘೋಸ್ಟ್' ಮೂಲಕ ಸ್ಯಾಂಡಲ್ ವುಡ್ ಗೆ ನಟ ಜಯರಾಮ್ ಪಾದಾರ್ಪಣೆ!
ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಟ ಜಯರಾಮ್ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದರ್ಪಣೆ ಮಾಡುತ್ತಿದ್ದಾರೆ.

ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಟ ಜಯರಾಮ್ ಶಿವರಾಜ್ ಕುಮಾರ್ ನಟನೆಯ ಘೋಸ್ಟ್ ಸಿನಿಮಾ ಮೂಲಕ ಕನ್ನಡಕ್ಕೆ ಪಾದರ್ಪಣೆ ಮಾಡುತ್ತಿದ್ದಾರೆ.
ನಟ ಶಿವರಾಜ್ ಕುಮಾರ್ ವರ 127ನೇ ಸಿನಿಮಾ ಫೋಸ್ಟ್ ಚಿತ್ರದ ಹಲವು ಪೋಸ್ಟರ್ ಗಳು ಈಗಾಗಲೇ ರಿಲೀಸ್ ಆಗಿದ್ದು, ಇದಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಸಿನಿಮಾದ ಮುಹೂರ್ತ ಕಾರ್ಯ ಕೂಡ ಇತ್ತೀಚೆಗೆ ಸಿಂಪಲ್ ಆಗಿ ನೆರವೇರಿದ್ದು, ಇದರ ಫೋಟೋಗಳನ್ನು ಸಿನಿಮಾ ನಿರ್ದೇಶಕ ಶ್ರೀನಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
ಇದೀಗ ಈ ಸಿನಿಮಾದ ಕುರಿತು ಮತ್ತೊಂದು ಹೊಸ ವಿಚಾರ ರಿವೀಲ್ ಆಗಿದ್ದು, ಸಿನಿಮಾದಲ್ಲಿ ಮಲಯಾಳಂನ ಖ್ಯಾತ ನಟ ಜಯರಾಮ್ ನಟಿಸಲಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ನಿರ್ದೇಶಕ ಶ್ರೀನಿಯವರೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದು, ಈ ಸಿನಿಮಾದ ಮೂಲಕ ಜಯರಾಮ್ ಅವರು ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಲಿದ್ದಾರೆ.
ಘೋಸ್ಟ್ ಚಿತ್ರದಲ್ಲಿ ಪ್ರಶಾಂತ್ ನಾರಾಯಣನ್, ಅಚ್ಯುತ್ ಕುಮಾರ್, ದತ್ತಣ್ಣ ಮತ್ತು ಅವಿನಾಶ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಮತ್ತು ಮಹೇಂದ್ರ ಸಿಂಹ ಅವರ ಛಾಯಾಗ್ರಹಣವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


