ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಫಹಾದ್–ಪವನ್ ಕುಮಾರ್ ಜೋಡಿಯ ‘ಧೂಮಂ’ ಚಿತ್ರೀಕರಣ ಆರಂಭ
ಲೂಸಿಯಾ ಖ್ಯಾತಿಯ ನಿರ್ದೇಶಕ ಪವನ್ ಕುಮಾರ್ ನಿರ್ದೇಶನದಲ್ಲಿ ಬಹುಭಾಷಾ ತಾರೆ ಫಹಾದ್ ಫಾಸಿಲ್ ನಟಿಸುತ್ತಿರುವ ‘ಧೂಮಂ’ಚಿತ್ರದ ಚಿತ್ರೀಕರಣ ಆರಂಭಗೊಂಡಿದೆ.

ಲೂಸಿಯಾ ಖ್ಯಾತಿಯ ನಿರ್ದೇಶಕ ಪವನ್ ಕುಮಾರ್ ನಿರ್ದೇಶನದಲ್ಲಿ ಬಹುಭಾಷಾ ತಾರೆ ಫಹಾದ್ ಫಾಸಿಲ್ ನಟಿಸುತ್ತಿರುವ ‘ಧೂಮಂ’ಚಿತ್ರದ ಚಿತ್ರೀಕರಣ ಆರಂಭಗೊಂಡಿದೆ. ಫಹಾದ್ ಫಾಸಿಲ್ ಹಾಗೂ ಅಪರ್ಣ ಬಾಲಮುರಳಿ ಜೋಡಿಯಾಗಿ ನಟಿಸುತ್ತಿರುವ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.
ಧೂಮಂ ಸಿನಿಮಾ ಶೂಟಿಂಗ್ ಆರಂಭವಾಗಿರುವ ಬಗ್ಗೆ ಹೊಂಬಾಳೆ ನಿರ್ಮಾಣ ಸಂಸ್ಥೆ ಟ್ವಿಟ್ಟರ್ ನಲ್ಲಿ ಅಧಿಕೃತ ಘೋಷಣೆ ಮಾಡಿದೆ. ಕೆಜಿಎಫ್ , ಕಾಂತಾರ ದಂತಹ ಅದ್ಭುತ ಚಿತ್ರವನ್ನ ನಿರ್ಮಾಣ ಮಾಡಿರುವ ಹೊಂಬಾಳೆ ಬ್ಯಾನರ್‌ನಲ್ಲಿ ‘ಧೂಮಂ’ ಸಿನಿಮಾ ಮೂಡಿ ಬರುತ್ತಿದೆ. ʼಪುಷ್ಪʼ ಸ್ಟಾರ್ ಫಹಾದ್ ಫಾಸಿಲ್‌ಗೆ ಪವನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಭಿನ್ನ ಕಥೆಯನ್ನ ತೆರೆಯ ಮೇಲೆ ತೋರಿಸಲು ಚಿತ್ರತಂಡ ಸಜ್ಜಾಗಿದೆ. ಸದ್ಯ ಧೂಮ್ ಚಿತ್ರಕ್ಕೆ ಚಾಲನೆ ಸಿಕ್ಕಿದೆ.
"ಫಹಾದ್ ಮತ್ತು ಅಪರ್ಣಾ ಅವರು ನಮ್ಮ ನಿರ್ಮಾಣ ಸಂಸ್ಥೆಯ ಸಿನಿಮಾಗೆ ಜೊತೆಯಾಗಿರುವುದು ಸಂತಸ ತಂದಿದೆ, ಧೂಮಂ ಸಾಂಪ್ರದಾಯಿಕ ಸಿನಿಮಾದ ಎಲ್ಲಾ ಪ್ರಕಾರಗಳಿಗಿಂತ ವಿಭಿನ್ನವಾದ ವಿಶಿಷ್ಟವಾದ ಕಥಾಹಂದರವನ್ನು ಹೊಂದಿದೆ. ನಿರ್ದೇಶಕ ಪವನ್ ಕುಮಾರ್ ಹಲವಾರು ತಿಂಗಳುಗಳ ಕಾಲ ಸ್ಕ್ರಿಪ್ಟ್‌ನಲ್ಲಿ ಕೆಲಸ ಮಾಡಿದ್ದಾರೆ, ಅಭಿಮಾನಿಗಳು ಸಿನಿಮಾವನ್ನು ಖಂಡಿತಾ ಇಷ್ಟಪಡುತ್ತಾರೆ ಎಂದು ವಿಜಯ ಕಿರಂಗದೂರು ತಿಳಿಸಿದ್ದಾರೆ.
'ಧೂಮಂ', ಥ್ರಿಲ್ಲರ್, ಮಲಯಾಳಂ, ಕನ್ನಡ, ತಮಿಳು ಮತ್ತು ತೆಲುಗು ಸೇರಿದಂತೆ 4 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಫಹದ್ ಮತ್ತು ಅಪರ್ಣಾ ಅವರಲ್ಲದೆ, ಅಚ್ಯುತ್ ಕುಮಾರ್, ಜಾಯ್ ಮ್ಯಾಥ್ಯೂ, ದೇವ್ ಮೋಹನ್, ಅನು ಮೋಹನ್ ಮತ್ತು ನಂದು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು "ಕೆಜಿಎಫ್" ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಆಗಮಿಸಿ ಶುಭ ಕೋರಿದರು. ಮುಂದಿನ ತಿಂಗಳಿನಿಂದ "ಧೂಮಂ" ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಹಾಗೂ ಪ್ರೀತಾ ಜಯರಾಮನ್ ಛಾಯಾಗ್ರಹಣ "ಧೂಮಂ" ಚಿತ್ರಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


