ಸಿನಿಮಾ ಸುದ್ದಿ

ತರುಣ್ ಕಿಶೋರ್ ಸುಧೀರ್ ನಿರ್ದೇಶನದ 'ಡಿ 56' ಚಿತ್ರೀಕರಣ ಪುನರಾರಂಭಿಸಿದ ನಟ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ವಿ. ಹರಿಕೃಷ್ಣ ನಿರ್ದೇಶನದ ಕ್ರಾಂತಿ ಸಿನಿಮಾದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ನಟ ದರ್ಶನ್ ಈಗ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರ ಚಿತ್ರದ ಶೂಟಿಂಗ್‌ ಅನ್ನು ಪುನರಾರಂಭಿಸಿದ್ದಾರೆ.

ತರುಣ್ ಕಿಶೋರ್ ಸುಧೀರ್ ನಿರ್ದೇಶನದ 'ಡಿ 56' ಚಿತ್ರೀಕರಣ ಪುನರಾರಂಭಿಸಿದ ನಟ ದರ್ಶನ್
ನಟ ದರ್ಶನ್- ತರುಣ್ ಕಿಶೋರ್ ಸುಧೀರ್
Published On :

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ವಿ. ಹರಿಕೃಷ್ಣ ನಿರ್ದೇಶನದ ಕ್ರಾಂತಿ ಸಿನಿಮಾದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ನಟ ದರ್ಶನ್ ಈಗ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರ ಚಿತ್ರದ ಶೂಟಿಂಗ್‌ ಅನ್ನು ಪುನರಾರಂಭಿಸಿದ್ದಾರೆ.

ತಾತ್ಕಾಲಿಕವಾಗಿ 'ಡಿ56' ಸಿನಿಮಾದ ಬಗ್ಗೆ ಇನ್ನಷ್ಟು ವಿವರಗಳನ್ನು ಚಿತ್ರತಂಡ ನೀಡಬೇಕಿದ್ದು, ಡಿ 56 ರ ಫಸ್ಟ್ ಲುಕ್ ಥೀಮ್ ಪೋಸ್ಟರ್ ರಿಲೀಸ್ ಆಗಿದೆ. ಚಿತ್ರವು ನಿಜ ಜೀವನದ ಘಟನೆಯನ್ನು ಆಧರಿಸಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ನವೆಂಬರ್‌ನಲ್ಲಿ ಒಂದು ತಿಂಗಳ ಕಾಲ ಚಿತ್ರತಂಡ ಹೈದರಾಬಾದ್‌ಗೆ ತೆರಳಲಿದೆ.

ಡಿ 56 ಸಿನಿಮಾಗೆ ನಟಿ ಮಾಲಾಶ್ರೀ ಅವರ ಪುತ್ರಿ ರಾಧನಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ತಮ್ಮ ಚೊಚ್ಚಲ ಸಿನಿಮಾದಲ್ಲೇ ಅವರು ದರ್ಶನ್ ಅವರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ.

ಚೌಕ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದ ದರ್ಶನ್, ರಾಬರ್ಟ್ ಸಿನಿಮಾದ ನಂತರ ಮೂರನೇ ಬಾರಿಗೆ ತರುಣ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ತರುಣ್ ಇತ್ತೀಚೆಗಷ್ಟೇ ಬಿಡುಗಡೆಯಾದ ಗುರು ಶಿಷ್ಯರು ಸಿನಿಮಾದ ಮೂಲಕ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು. ಗುರು ಶಿಷ್ಯರು ಸಿನಿಮಾ ಸಿನಿಪ್ರಿಯರಿಂದ ಉತ್ತಮ ವಿಮರ್ಶೆಗಳನ್ನು ಪಡೆಯುತ್ತಿದೆ ಮತ್ತು ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.