ದಾಂಪತ್ಯ ಜೀವನಕ್ಕೆ ಕಾಲಿಡಲು 'ಬಿಂದಾಸ್' ನಟಿ ಹನ್ಸಿಕಾ ಮೋಟ್ವಾನಿ ಸಜ್ಜು
ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸಾಕಷ್ಟು ಸಿನಿಮಾಗಳ ಮೋಡಿ ಮಾಡಿರುವ ನಟಿ ತೆರೆಮರೆಯಲ್ಲಿ ಸೈಲೆಂಟ್ ಆಗಿ ತಮ್ಮ ಮದುವೆಗೆ ಸಿದ್ಧತೆ ನಡೆಸಿದ್ದಾರೆ.

ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಸಾಕಷ್ಟು ಸಿನಿಮಾಗಳ ಮೋಡಿ ಮಾಡಿರುವ ನಟಿ ತೆರೆಮರೆಯಲ್ಲಿ ಸೈಲೆಂಟ್ ಆಗಿ ತಮ್ಮ ಮದುವೆಗೆ ಸಿದ್ಧತೆ ನಡೆಸಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ನಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ತಮಿಳು, ತೆಲುಗು, ಕನ್ನಡ ಸಿನಿಮಾಗಳ ಮೂಲಕ ಗಮನ ಸೆಳೆದ ಪ್ರತಿಭಾನ್ವಿತ ನಟಿ ಹನ್ಸಿಕಾ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ತಮ್ಮ ಮಾದಕ ನೋಟದಿಂದ ಪಡ್ಡೆಹುಡುಗರ ನಿದ್ದೆಗೆಡಿಸಿದ್ದ ಚೆಲುವೆ ಹನ್ಸಿಕಾ ಕೈಯಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿವೆ. ಚಿತ್ರರಂಗದಲ್ಲಿ ಡಿಮ್ಯಾಂಡ್ ಇರುವ ಸಮಯದಲ್ಲೇ ನಟಿ ಹೊಸ ಬಾಳಿಗೆ ಕಾಲಿಡಲು ಸಜ್ಜಾಗಿದ್ದಾರೆ.
ದಕ್ಷಿಣ ಭಾರತದ ರಾಜಕೀಯ ಮುಖಂಡರೊಬ್ಬರ ಮಗನೊಂದಿಗೆ ಮದುವೆಗೆ ನಟಿ ರೆಡಿಯಾಗಿದ್ದಾರೆ. ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರೆ ನಟಿ ಹನ್ಸಿಕಾ ಮೋಟ್ವಾನಿ. ಈಗಾಗಲೇ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ನಡೆದಿದ್ದು, ಡಿಸೆಂಬರ್ನಲ್ಲಿ ಈ ಜೋಡಿ ಹಸೆಮಣೆ ಏರಲಿದ್ದಾರೆ. ಅಂದಹಾಗೆ ಪುನೀತ್ ರಾಜ್ಕುಮಾರ್ ನಟನೆಯ ʻಬಿಂದಾಸ್ʼ ಚಿತ್ರದಲ್ಲಿ ನಾಯಕಿಯಾಗಿ ನಟಿಸಿ ಸೈ ಎನಿಸಿಕೊಂಡಿದ್ದರು. ಈ ಮೂಲಕ ಸ್ಯಾಂಡಲ್ವುಡ್ನಲ್ಲೂ ಛಾಪೂ ಮೂಡಿಸಿದ್ದರು.
ಹನ್ಸಿಕಾ ಮೋಟ್ವಾನಿ ಅವರಿಗೆ ಈಗ 31 ವರ್ಷ ವಯಸ್ಸು. ಚಿತ್ರರಂಗದಲ್ಲಿ ಅವರಿಗೆ ಹಲವು ವರ್ಷಗಳ ಅನುಭವ ಇದೆ. ಬಾಲನಟಿಯಾಗಿಯೇ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಹೃತಿಕ್ ರೋಷನ್ ನಟನೆಯ ‘ಕೋಯಿ ಮಿಲ್ ಗಯಾ’ ಸಿನಿಮಾದಲ್ಲಿ ಅವರು ನಟಿಸಿ, ಗಮನ ಸೆಳೆದಿದ್ದರು. ಬಳಿಕ ಹೀರೋಯಿನ್ ಆಗಿ ಬಡ್ತಿ ಪಡೆದುಕೊಂಡರು. ತಮಿಳು, ತೆಲುಗು, ಮಲಯಾಳಂ, ಕನ್ನಡದಲ್ಲಿ ಅಭಿನಯಿಸಿ ಹೆಚ್ಚಿನ ಜನಪ್ರಿಯತೆ ಪಡೆದುಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


