ಸಿನಿಮಾ ಸುದ್ದಿ

ಕೆಜಿಎಫ್ ದಾಖಲೆ ಮುರಿದ ಕಾಂತಾರ! ಹೊಂಬಾಳೆ ಫಿಲಂಸ್ ನಿಂದ ಅಧಿಕೃತ ಘೋಷಣೆ

ಸದ್ಯ ಎಲ್ಲೆಲ್ಲೂ ಕಾಂತಾರದ್ದೇ ಸದ್ದು. ಕರಾವಳಿಯ ವಿಶಿಷ್ಠ ಸಂಸ್ಕೃತಿ ಅನಾವರಣದ ಕಾಂತಾರ ಸಿನಿಮಾ ದೇಶ, ವಿದೇಶಗಳ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿರುವಂತೆಯೇ, ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ.

ಕೆಜಿಎಫ್ ದಾಖಲೆ ಮುರಿದ ಕಾಂತಾರ! ಹೊಂಬಾಳೆ ಫಿಲಂಸ್ ನಿಂದ ಅಧಿಕೃತ ಘೋಷಣೆ
ಕಾಂತಾರ ಚಿತ್ರದ ಫೋಸ್ಟರ್
Published On :

ಬೆಂಗಳೂರು: ಸದ್ಯ ಎಲ್ಲೆಲ್ಲೂ ಕಾಂತಾರದ್ದೇ ಸದ್ದು. ಕರಾವಳಿಯ ವಿಶಿಷ್ಠ ಸಂಸ್ಕೃತಿ ಅನಾವರಣದ ಕಾಂತಾರ ಸಿನಿಮಾ ದೇಶ, ವಿದೇಶಗಳ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿರುವಂತೆಯೇ, ಹೊಸ ಹೊಸ ದಾಖಲೆಗಳನ್ನು ಬರೆಯುತ್ತಿದೆ.

ರಾಜ್ಯದಲ್ಲಿ ಮೂರನೇ ವಾರವೂ ಜನಭರಿತ ಸಿನಿಮಾವಾಗಿ ಪ್ರದರ್ಶನ ಕಾಣುತ್ತಿದ್ದು, ಕೆಜಿಎಫ್ ದಾಖಲೆಯನ್ನು ಮುರಿದಿದೆ. ಇನ್ನಷ್ಟು ಹೊಸ ದಾಖಲೆ ನಿರ್ಮಿಸುವ ಹಾದಿಯಲ್ಲಿ ಮುನ್ನುಗಿದೆ.

ಈ ಕುರಿತು ಟ್ವೀಟ್ ನಲ್ಲಿ ಅಧಿಕೃತ ಮಾಹಿತಿ ನೀಡಿರುವ ಹೊಂಬಾಳೆ ಫಿಲಂಸ್ ಸಂಸ್ಥೆ, ಈವರೆಗೆ ನಿರ್ಮಿಸಿರುವ ಚಲನಚಿತ್ರಗಳ ಪೈಕಿ ಕರ್ನಾಟಕದಲ್ಲಿ ‘ಅತ್ಯಂತ ಹೆಚ್ಚು ಜನ ವೀಕ್ಷಿಸಿದ ಚಿತ್ರ’ ಎಂಬ ಹೆಗ್ಗಳಿಕೆಗೆ ಕಾಂತಾರ ಪಾತ್ರವಾಗಿದೆ. ಇನ್ನಷ್ಟು ಹೊಸ ದಾಖಲೆ ನಿರ್ಮಿಸುವ ಹಾದಿಯಲ್ಲಿ ಕಾಂತಾರ ಸಾಗುತ್ತಿರುವುದಾಗಿ ತಿಳಿಸಿದೆ.

ರಿಷಬ್ ಶೆಟ್ಟಿ ಚಿತ್ರಕಥೆ ಬರೆದು, ನಿರ್ದೇಶಿಸಿರುವ ಜೊತೆಗೆ ಅವರೇ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.