ಸಿನಿಮಾ ಸುದ್ದಿ

ಚಿತ್ರರಂಗದಲ್ಲಿ 25 ವರ್ಷಗಳ ಪಯಣ: ಸುದೀಪ್​ ಸಾಧನೆಗೆ ಅಂಚೆ ಇಲಾಖೆ ಗೌರವ; ವಿಶೇಷ ಅಂಚೆ ಲಕೋಟೆ ಬಿಡುಗಡೆಗೆ ಸಿದ್ಧತೆ!

ಚಿತ್ರರಂಗದಲ್ಲಿ 25 ವರ್ಷಗಳನ್ನು ಕಳೆದಿರುವ ನಟ ಸುದೀಪ್ ಅವರ ಸಾಧನೆಯನ್ನು ಸಹ ಭಾರತೀಯ ಅಂಚೆ ಇಲಾಖೆ ದಾಖಲೆ ಮಾಡುತ್ತಿದೆ. ಆ ನಿಮಿತ್ತ ಇಂದು ಅಂಚೆ ಇಲಾಖೆಯ ಅಧೀಕ್ಷರಾದ ಮಾದೇಶ್ ಅವರು ಕಿಚ್ಚ ಸುದೀಪ್ ಅವರ ಮನೆಗೆ ಆಗಮಿಸಿ ಅವರಿಂದ NOC ಪಡೆದರು ಮತ್ತು ಬಿಡುಗಡೆ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಿದರು.

ಚಿತ್ರರಂಗದಲ್ಲಿ 25 ವರ್ಷಗಳ ಪಯಣ: ಸುದೀಪ್​ ಸಾಧನೆಗೆ ಅಂಚೆ ಇಲಾಖೆ ಗೌರವ; ವಿಶೇಷ ಅಂಚೆ ಲಕೋಟೆ ಬಿಡುಗಡೆಗೆ ಸಿದ್ಧತೆ!
ಸುದೀಪ್
Published On :

ಚೆನ್ನೈ: ಭಾರತೀಯ ಅಂಚೆ ಇಲಾಖೆಯು ಕಿಚ್ಚ ಸುದೀಪ್ ಅವರ 'ವಿಶೇಷ ಅಂಚೆ ಲಕೋಟೆ'ಯನ್ನು ಹೊರ ತರುತ್ತಿದೆ. ಭಾರತ ಸರ್ಕಾರದ ಅಂಚೆ ಇಲಾಖೆಯು ದೇಶದ ಮಹತ್ತರ ಘಟನೆಗಳನ್ನು, ಪ್ರಶಸ್ತಿಗಳನ್ನು ಅಥವಾ ವ್ಯಕ್ತಿಗಳ ಸಾಧನೆಗಳನ್ನು ನೂರಾರು ವರ್ಷ ದಾಖಲೆಯಾಗಿ ಉಳಿಸಬೇಕೆಂಬ ಕಾರಣಕ್ಕೆ 'ವಿಶೇಷ ಅಂಚೆ ಲಕೋಟೆಯನ್ನು' ಬಿಡುಗಡೆ ಮಾಡುತ್ತದೆ.

ಚಿತ್ರರಂಗದಲ್ಲಿ 25 ವರ್ಷಗಳನ್ನು ಕಳೆದಿರುವ ನಟ ಸುದೀಪ್ ಅವರ ಸಾಧನೆಯನ್ನು ಸಹ ಭಾರತೀಯ ಅಂಚೆ ಇಲಾಖೆ ದಾಖಲೆ ಮಾಡುತ್ತಿದೆ. ಆ ನಿಮಿತ್ತ ಇಂದು ಅಂಚೆ ಇಲಾಖೆಯ ಅಧೀಕ್ಷರಾದ ಮಾದೇಶ್ ಅವರು ಕಿಚ್ಚ ಸುದೀಪ್ ಅವರ ಮನೆಗೆ ಆಗಮಿಸಿ ಅವರಿಂದ NOC ಯನ್ನು ಪಡೆದರು ಮತ್ತು ಬಿಡುಗಡೆ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಿದರು.

ಈ ವಿಶೇಷ ಅಂಚೆ ಲಕೋಟೆಯ ಬಿಡುಗಡೆ ಸಮಾರಂಭವು ಶೀಘ್ರದಲ್ಲಿಯೇ ನೆರವೇರಲಿದೆ. ಕಿಚ್ಚ ಸುದೀಪ್ ಅವರ ಸಾಧನೆಗಳನ್ನು ಗುರುತಿಸಿ 'ವಿಶೇಷ ಅಂಚೆ ಲಕೋಟೆ' ಮೂಲಕ ಗೌರವ ಸಲ್ಲಿಸುತ್ತಿರುವ ಭಾರತೀಯ ಅಂಚೆ ಇಲಾಖೆಯನ್ನು ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಮತ್ತು ಕನ್ನಡ ಮನಸುಗಳು ಸಾಮಾಜಿಕ ಜಾಲತಾಣದಲ್ಲಿ ಹೃದಯತುಂಬಿ ಶ್ಲಾಘಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.