ಸಿನಿಮಾ ಸುದ್ದಿ

ಸರ್ಕಾರದ ‘ಪುಣ್ಯಕೋಟಿ’ ಯೋಜನೆಗೆ ಸುದೀಪ್ ರಾಯಭಾರಿ: ಸಂಭಾವನೆ ಪಡೆಯದ ಕಿಚ್ಚ!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.

ಸರ್ಕಾರದ ‘ಪುಣ್ಯಕೋಟಿ’ ಯೋಜನೆಗೆ ಸುದೀಪ್ ರಾಯಭಾರಿ: ಸಂಭಾವನೆ ಪಡೆಯದ ಕಿಚ್ಚ!
ಪುಣ್ಯಕೋಟಿ ಯೋಜನೆ ರಾಯಭಾರಿಯಾಗಿ ಸುದೀಪ್
Published On :

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.

ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ  ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ  ಈ ಶುಭ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.

ಪಶು ಸಂಗೋಪನೆ ಇಲಾಖೆಯ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಸುದೀಪ್ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಹಿಂದೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ನಟ ಸುದೀಪ್‌ ಅವರಿಗೆ ಪತ್ರ ಬರೆದು, ಪುಣ್ಯಕೋಟಿ ರಾಯಭಾರಿಯಾಗುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ನಟ ಸುದೀಪ್‌ ಪಶು ಸಂಗೋಪನೆ ಇಲಾಖೆಯ ರಾಯಭಾರಿ ಕೆಲಸ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.