'KD' ವಿಭಿನ್ನ ಟೈಟಲ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ ಯೋಗರಾಜ್ ಭಟ್
ಗಾಳಿಪಟ 2 ಸಿನಿಮಾದ ಯಶಸ್ಸಿನಲ್ಲಿರುವ ನಿರ್ದೇಶಕ ಯೋಗರಾಜ್ ಭಟ್ ಅವರು ಇಂದು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

ಗಾಳಿಪಟ 2 ಸಿನಿಮಾದ ಯಶಸ್ಸಿನಲ್ಲಿರುವ ನಿರ್ದೇಶಕ ಯೋಗರಾಜ್ ಭಟ್ ಅವರು ಇಂದು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.
ಈ ಸಿನಿಮಾದಲ್ಲಿ ತಮಿಳು ನಟ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಒಂದೇ ತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಯಾವ ಪಾತ್ರ ಎಂದು ರಿವೀಲ್ ಮಾಡಿಲ್ಲ.
ಆದರೆ ಸಿನಿಮಾದ ಹೆಸರು ರಿವೀಲ್ ಮಾಡಿರುವ ಅವರು, ಚಿತ್ರಕ್ಕೆ K ಕರಟಕ D ದಮನಕ ಎಂಬ ವಿಭಿನ್ನ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದ್ದು, ಸದ್ಯ ಶಿವರಾಜ್ ಕುಮಾರ್, ಪ್ರಭುದೇವ ನಡುವಿನ ಸನ್ನಿವೇಶ ನಡೆಯುತ್ತಿದೆ. ಶಿವಣ್ಣ ಹಾಗು ಪ್ರಭುದೇವ ಜೊತೆಗೆ ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.
ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಪ್ರೊಡಕ್ಷನ್ ನಂ 47 ಹೆಸರಿನಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


