ಬಿಡುಗಡೆಗೂ ಮುನ್ನವೇ 'ಗುರು ಶಿಷ್ಯರು' ಭರ್ಜರಿ ಕಲೆಕ್ಷನ್
ಶರಣ್ ಅಭಿನಯದ ಗುರು ಶಿಷ್ಯರು ಚಿತ್ರ ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದ್ದು, ಬಿಡುಗಡೆಗೂ ಮುನ್ನವೇ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.

ಶರಣ್ ಅಭಿನಯದ ಗುರು ಶಿಷ್ಯರು ಚಿತ್ರ ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದ್ದು, ಬಿಡುಗಡೆಗೂ ಮುನ್ನವೇ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.
ಜಡೇಶಾ ಕೆ ಹಂಪಿ ನಿರ್ದೇಶನದ ಕ್ರೀಡಾ ಆಧಾರಿತ ಈ ಚಿತ್ರ ಸ್ಟಾರ್ ಮಕ್ಕಳು ಮತ್ತು ಇತರ ಮುಂಬರುವ ಪ್ರತಿಭೆಗಳನ್ನು ಒಳಗೊಂಡಿದೆ. ಚಿತ್ರದ ಆಡಿಯೋ, ಡಿಜಿಟಲ್ ಮತ್ತು ಸ್ಯಾಟಲೈಟ್ ಹಕ್ಕುಗಳು ಉತ್ತಮ ಬೆಲೆಗೆ ಮಾರಾಟವಾಗಿವೆ ಮತ್ತು ವಿವಿಧ ವಿತರಕರಿಂದ ಬೇಡಿಕೆ ಸೃಷ್ಟಿಸಿದೆ.
“ನಿರ್ಮಾಪಕ ಜಗದೀಶ್ ಗೌಡ, ಬೆಂಗಳೂರು, ಕೋಲಾರ ಮತ್ತು ತುಮಕೂರು ಪ್ರದೇಶಗಳಲ್ಲಿ ಚಿತ್ರದ ವಿತರಣೆಯ ಹಕ್ಕು ಪಡೆದಿದ್ದಾರೆ. ಜಯಣ್ಣ ಫಿಲಂಸ್ ಮೈಸೂರು, ಮಂಡ್ಯ, ಮಡಿಕೇರಿ ಮತ್ತು ಹಾಸನದಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಿದೆ.
ಶಿವಾನಂದ್ ಚುಕ್ಕಿ ಮತ್ತು ಬಸವರಾಜ್ ಅವರು ಉತ್ತರ ಕರ್ನಾಟಕ ಪ್ರದೇಶವನ್ನು ನೋಡಿಕೊಳ್ಳುತ್ತಿದ್ದು, ಚಂದ್ರಪ್ಪ ಶಿವಮೊಗ್ಗ ಅವರು ಸೌತ್ ಕೆನರಾ ಪ್ರದೇಶಗಳಲ್ಲಿ ಚಿತ್ರವನ್ನು ವಿತರಿಸಲಿದ್ದಾರೆ ಎಂದು ಚಿತ್ರದ ಕ್ರಿಯೇಟಿವ್ ಹೆಡ್ ತರುಣ್ ಕಿಶೋರ್ ಸುಧೀರ್ ತಿಳಿಸಿದ್ದಾರೆ.
ಚಿತ್ರದ ಮೂರನೇ ಹಾಡು ಮತ್ತು ಪ್ರೇರಕ ಹಾಡನ್ನು ಸೆಪ್ಟೆಂಬರ್ 15 ರಂದು ಬಿಡುಗಡೆಯಾಗಲಿದೆ.
ನಿರ್ಮಾಪಕರು ಕರ್ನಾಟಕದಾದ್ಯಂತ 200 ಪ್ಲಸ್ ಥಿಯೇಟರ್‌ಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ ಎಂದು ತರುಣ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


