ನಟ ರಾಕ್ಷಸ ಧನಂಜಯ್ 26ನೇ ಸಿನಿಮಾಗೆ ತೆಲುಗು ನಿರ್ದೇಶಕ ಈಶ್ವರ್ ಕಾರ್ತಿಕ್ ಆ್ಯಕ್ಷನ್-ಕಟ್!
ಕನ್ನಡದಲ್ಲೂ ತೆರೆಕಂಡ ಭೈರವ ಗೀತ ಚಿತ್ರದ ಮೂಲಕ ಟಾಲಿವುಡ್‌ಗೆ ಎಂಟ್ರಿ ಕೊಟ್ಟ ಧನಂಜಯ್, ತಮ್ಮ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಪೆಂಗ್ವಿನ್ ಚಿತ್ರವನ್ನು ನಿರ್ದೇಶಿಸಿದ್ದ ಈಶ್ವರ್ ಕಾರ್ತಿಕ್ ಅವರ ನಿರ್ದೇಶನದ ಮುಂಬರುವ ಚಿತ್ರದಲ್ಲಿ ಧನಂಜಯ್ ಕಾಣಿಸಿಕೊಳ್ಳಲಿದ್ದಾರೆ.

ಕನ್ನಡದಲ್ಲೂ ತೆರೆಕಂಡ ಭೈರವ ಗೀತ ಚಿತ್ರದ ಮೂಲಕ ಟಾಲಿವುಡ್‌ಗೆ ಎಂಟ್ರಿ ಕೊಟ್ಟ ಧನಂಜಯ್, ತಮ್ಮ ಮುಂದಿನ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಪೆಂಗ್ವಿನ್ ಚಿತ್ರವನ್ನು ನಿರ್ದೇಶಿಸಿದ್ದ ಈಶ್ವರ್ ಕಾರ್ತಿಕ್ ಅವರ ನಿರ್ದೇಶನದ ಮುಂಬರುವ ಚಿತ್ರದಲ್ಲಿ ಧನಂಜಯ್ ಕಾಣಿಸಿಕೊಳ್ಳಲಿದ್ದಾರೆ. ಇದು ಅವರ 26ನೇ ಚಿತ್ರವಾಗಿದೆ.
ಬಹುತಾರಾಗಣದ ಸಿನಿಮಾದಲ್ಲಿ ತೆಲುಗು ನಟ ಸತ್ಯದೇವ್ ಕೂಡ ಇದ್ದಾರೆ. ತೆಲುಗು ಮತ್ತು ಕನ್ನಡದಲ್ಲಿ ತಯಾರಾಗಿರುವ ಇನ್ನೂ ಹೆಸರಿಡದ ಚಲನಚಿತ್ರವು ಕ್ರೈಮ್ ಆ್ಯಕ್ಷನ್ ಕಥೆಯನ್ನು ಹೊಂದಿದೆ ಮತ್ತು ಓಲ್ಡ್ ಟೌನ್ ಪಿಕ್ಚರ್ಸ್ ಬ್ಯಾನರ್‌ನ ಮೊದಲ ನಿರ್ಮಾಣ ಇದಾಗಿದೆ.
ಯೋಜನೆಯ ಬಗ್ಗೆ ಅಧಿಕೃತ ಪ್ರಕಟಣೆಯನ್ನು ನಿರ್ದೇಶಕ ಈಶ್ವರ್ ಕಾರ್ತಿಕ್ ಮತ್ತು ನಟ ಧನಂಜಯ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟರ್ ಜೊತೆಗೆ ಹಂಚಿಕೊಂಡಿದ್ದಾರೆ.
ತಮ್ಮ ಹೊಸ ಪ್ರಾಜೆಕ್ಟ್ ಕುರಿತು ಸಿನಿಮಾ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ ಧನಂಜಯ್, ಪೆಂಗ್ವಿನ್ ನಿರ್ದೇಶಕ ಈಶ್ವರ್ ಕಾರ್ತಿಕ್ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ. 'ನಿರ್ದೇಶಕರು ಅದ್ಭುತವಾದ ಸ್ಕ್ರಿಪ್ಟ್‌ನೊಂದಿಗೆ ಬಂದಿದ್ದಾರೆ ಮತ್ತು ನಾನು ಈ ಸಿನಿಮಾಗೆ ಸೇರಬೇಕೆಂದು ಅವರು ಬಯಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ' ಎಂದು ತಿಳಿಸಿದ್ದಾರೆ.
'ನಾನು ಹೊಯ್ಸಳ ಚಿತ್ರೀಕರಣದಲ್ಲಿದ್ದಾಗ ಈ ಚಿತ್ರದ ಕಥೆಯನ್ನು ನನಗೆ ಹೇಳಲಾಯಿತು. ಕೂಡಲೇ ನಾವು ಸಂಪರ್ಕ ಸಾಧಿಸಿದ್ದೇವೆ. ನಾನು ಈ ಮಲ್ಟಿಸ್ಟಾರರ್ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದೇನೆ ಮತ್ತು ಸತ್ಯದೇವ್ ಅವರೊಂದಿಗೆ ತೆರೆ ಹಂಚಿಕೊಳ್ಳಲು ಎದುರು ನೋಡುತ್ತಿದ್ದೇನೆ. ಪ್ರಾಜೆಕ್ಟ್‌ನ ಶೂಟಿಂಗ್ ಶೀಘ್ರದಲ್ಲೇ ಪ್ರಾರಂಭವಾಗಲಿದ್ದು, ಡಿಸೆಂಬರ್‌ನಲ್ಲಿ ನಾನು ಈ ತಂಡವನ್ನು ಸೇರಲಿದ್ದೇನೆ' ಎಂದು ಅವರು ಹೇಳುತ್ತಾರೆ.
ಈ ಚಿತ್ರವನ್ನು ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಿಸಲಿದ್ದು, ಮಣಿಕಂಠನ್ ಕೃಷ್ಣಮಾಚಾರಿ ಅವರ ಛಾಯಾಗ್ರಹಣವಿದೆ. ಕನ್ನಡದ ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಟಗರು, ಸಲಗ ಚಿತ್ರಗಳ ಸಂಗೀತ ನಿರ್ದೇಶಕ ಚರಣ್ ರಾಜ್ ಅವರ ಸಂಗೀತ ಸಂಯೋಜನೆ ಮತ್ತು ಅನಿಲ್ ಕ್ರಿಶ್ ಸಂಕಲನ ಈ ಚಿತ್ರಕ್ಕಿದೆ.
ಚಿತ್ರಕ್ಕೆ ಸಂಭಾಷಣೆಯನ್ನು ಮೀರಾಖ್ ಬರೆಯಲಿದ್ದಾರೆ. ಇತ್ತೀಚೆಗಷ್ಟೇ ಮಾನ್ಸೂನ್ ರಾಗದಲ್ಲಿ ಕಾಣಿಸಿಕೊಂಡಿದ್ದ ಧನಂಜಯ್, ಸದ್ಯ ಹೊಯ್ಸಳ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಅವರು ತಮ್ಮ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ 'ಹೆಡ್ ಬುಷ್' ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಇದು ಅಕ್ಟೋಬರ್ 21 ರಂದು ಥಿಯೇಟರ್‌ಗಳಿಗೆ ಬರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


