'ಸೂಪರ್ ಸ್ಟಾರ್' ಕುಟುಂಬಕ್ಕೆ ಮತ್ತೊಂದು ಆಘಾತ: ಪ್ರಿನ್ಸ್ ಮಹೇಶ್ ಬಾಬು ತಾಯಿ ಇಂದಿರಾ ದೇವಿ ವಿಧಿವಶ
ತೆಲುಗು ನಟ 'ಪ್ರಿನ್ಸ್' ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಇಂದು (ಸೆ.28) ಮುಂಜಾನೆ ವಿಧಿವಶರಾಗಿದ್ದಾರೆ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಇಂದಿರಾ ದೇವಿ ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಕೆಲ ವಾರಗಳ ಹಿಂದೆ ದಾಖಲು ಮಾಡಲಾಗಿತ್ತು.

ತೆಲುಗು ನಟ 'ಪ್ರಿನ್ಸ್' ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಇಂದು (ಸೆ.28) ಮುಂಜಾನೆ ವಿಧಿವಶರಾಗಿದ್ದಾರೆ.
ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಇಂದಿರಾ ದೇವಿ ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಕೆಲ ವಾರಗಳ ಹಿಂದೆ ದಾಖಲು ಮಾಡಲಾಗಿತ್ತು.
ವೆಂಟಿಲೇಟರ್‌ನಲ್ಲಿರಿಸಿ, ಚಿಕಿತ್ಸೆ ಮುಂದುವರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮುಂಜಾನೆ ಇಂದಿರಾ ದೇವಿ ಇಹಲೋಕ ತ್ಯಜಿಸಿದ್ದಾರೆ. ಇಂದಿರಾ ದೇವಿ ನಿಧನಕ್ಕೆ ತೆಲುಗು ಚಿತ್ರರಂಗ ಸಂತಾಪ ಸೂಚಿಸಿದೆ. ಇಂದಿರಾ ದೇವಿ ಅವರ ಅಂತಿಮ ಸಂಸ್ಕಾರ ಇಂದು ಸಂಜೆ ನಡೆಯಲಿದೆ.
ಇಂದಿರಾದೇವಿ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 9 ಗಂಟೆಯ ನಂತರ ಇಂದಿರಾ ದೇವಿ ಅವರ ಪಾರ್ಥಿವ ಶರೀರವನ್ನು ಪದ್ಮಾಲಯ ಸ್ಟುಡಿಯೋದಲ್ಲಿ ಇರಿಸಲಾಗುವುದು ಎಂದು ಮಹೇಶ್ ಬಾಬು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಅಭಿಮಾನಿಗಳು ಪದ್ಮಾಲಯ ಸ್ಟುಡಿಯೋಗೆ ಆಗಮಿಸಿ ಇಂದಿರಮ್ಮ ಅವರ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಸಂಜೆ ಮಹಾಪ್ರಸ್ಥಾನದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ವರದಿಯಾಗಿದೆ. ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಇಂದಿರಮ್ಮ ಅವರ ನಿಧನಕ್ಕೆ ಚಿತ್ರರಂಗ, ರಾಜಕೀಯ ಸೇರಿದಂತೆ ಎಲ್ಲಾ ಗಣ್ಯರು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


