ವೈಜನಾಥ್ ಬಿರಾದಾರ್ ನಟನೆಯ 500 ನೇ ಚಿತ್ರ '90 ಬಿಡಿ ಮನಿಗ್ ನಡಿ: 70 ನೇ ವಯಸ್ಸಿನಲ್ಲಿ ನಾಯಕನಾದ ಹಾಸ್ಯನಟ!
ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ '90 ಬಿಡಿ ಮನೀಗ್ ನಡಿ' ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ.

ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ '90 ಬಿಡಿ ಮನೀಗ್ ನಡಿ' ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ.
ಇದು ಅವರ ನಟನೆಯ 500ನೇ ಚಿತ್ರವಾಗಿದ್ದು, ಇತ್ತೀಚೆಗೆ ಚಿತ್ರತಂಡ ಶೂಟಿಂಗ್ ಪೂರ್ಣಗೊಳಿಸಿದೆ. ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ ಕಥೆ ಬರೆದು, ಜಂಟಿಯಾಗಿ ನಿರ್ದೇಶಿಸಿರುವ ಈ ಚಿತ್ರಕ್ಕೆ ರತ್ನಮಾಲ ಬಾದರದಿನ್ನಿ ಬಂಡವಾಳ ಹೂಡಿದ್ದಾರೆ.
ಇತ್ತೀಚೆಗೆ ಈ ಸಿನಿಮಾದ ಸಿಂಗಲ್ ಕಣ್, ಡಬಲ್ ಹಾರ್ನ್, ಎಂಬ ಹಾಡಿಗೆ ಬಿರಾದಾರ್ ಹೆಜ್ಜೆ ಹಾಕಿದ್ದಾರೆ. ಬಿರಾದಾರ್ ಜೊತೆಗೆ ನಾಯಕಿ ನೀತಾ ಮೈಂದರಗಿಗೆ ಭೂಷಣ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಶಿವು ಬೆರಗಿ ರಚಿಸಿರುವ ಈ ಹಾಡಿಗೆ ಸ್ಟೆಪ್ ಹಾಕಲು ಬಿರಾದಾರ್ಗೆ ಐದು ದಿನಗಳ ಪ್ರಾಕ್ಟೀಸ್ ಮಾಡಿದ್ದಾರೆ.
ಸಾವಿರಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿ ಸೈ ಎನ್ನಿಸಿಕೊಂಡಿರುವ ರಂಗಭೂಮಿ ಕಲಾವಿದೆ ನೀತು. ಈ ಚಿತ್ರದಲ್ಲಿ ವೈಜನಾಥ್ ಬಿರಾದಾರ್ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಡ್ಯಾನ್ಸ್ ಜೊತೆಗೆ ಫೈಟ್ ಮಾಡಿರೋ ವೈಜನಾಥ್ ಬಿರಾದಾರ್ ಮಾತನಾಡಿ, ಈ ಚಿತ್ರದಲ್ಲಿ ನಾನು ಪೇಪರ್ ಆಯುವ ಪಾತ್ರ ಮಾಡಿದ್ದೀನಿ.
ಈ ಸಿನಿಮಾದಲ್ಲಿ ಸಂದೇಶ ಇದೆ. ನಿರ್ದೇಶಕರು ಹಾಗು ನಿರ್ಮಾಪಕರು ಇದ್ದರೆ ನಮ್ಮಂಥ ಕಲಾವಿದರು ಬೆಳೆಯೋದಿಕ್ಕೆ ಕಾರಣ. ಜೊತೆಗೆ ಕಲ್ಲಿನಂಥ ಕಲಾವಿದನನ್ನು ಶಿಲ್ಪಿ ಮಾಡುವ ತಾಖತ್ ಇರೋದು ನಿರ್ದೇಶಕನಿಗೆ ಎಂದು ಹೇಳಿದರು. ಚಿತ್ರದಲ್ಲಿ ರತ್ನಮಾಲ ಬಾದರದಿನ್ನಿ ಈ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ. ಸದ್ಯ ಟ್ರೈಲರ್ ಹಾಗು ಹಾಡುಗಳಿಂದ ಗಮನ ಸೆಳೆಯುತ್ತಿದೆ.
ಉತ್ತಮ ಸಂದೇಶ ಹೇಳುವಂತ ಕಥಾಹಂದರವನ್ನಿಟ್ಟುಕೊಂಡು ಉತ್ತರ ಕರ್ನಾಟಕ ಶೈಲಿಯಲ್ಲಿ ಕಥೆ ಹೇಳಲು ಹೊರಟ್ಟಿದ್ದೇವೆ. ಎಂಭತ್ತು ಭಾಗದಷ್ಟು ಸಂಭಾಷಣೆ ಉತ್ತರ ಕರ್ನಾಟಕ ಶೈಲಿಯಲ್ಲಿರುತ್ತದೆ. ಹಾಗಾಗಿ ನಮಗೆ ಉತ್ತರ ಕರ್ನಾಟಕದ ಕಲಾವಿದನೇ ಬೇಕಾಗಿತ್ತು. ಆಗ ಬಿರಾದಾರ್ ಅವರನ್ನು ಆಯ್ಕೆ ಮಾಡಿಕೊಂಡೆವು. ಅವರ 500 ನೇ ಚಿತ್ರವನ್ನು ನಿರ್ದೇಶಿಸುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕರಾದ ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


