ಛತ್ತೀಸ್ಗಢ: 22 ವರ್ಷದ ಯೂಟ್ಯೂಬರ್ ಲೀನಾ ನಾಗವಂಶಿ ನೇಣು ಬಿಗಿದು ಆತ್ಮಹತ್ಯೆ
ಕಿರುತೆರೆ ನಟಿ ತುನಿಷಾ ಶರ್ಮಾ ಅವರು ಶೂಟಿಂಗ್ ಸೆಟ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೆ 22 ವರ್ಷದ ಸೋಷಿಯಲ್ ಮೀಡಿಯಾ ಇನ್ಫ್ಲೂಯೆನ್ಸರ್ ಲೀನಾ ನಾಗವಂಶಿ ಅವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಯ್ಪುರ: ಕಿರುತೆರೆ ನಟಿ ತುನಿಷಾ ಶರ್ಮಾ ಅವರು ಶೂಟಿಂಗ್ ಸೆಟ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೆ 22 ವರ್ಷದ ಸೋಷಿಯಲ್ ಮೀಡಿಯಾ ಇನ್ಫ್ಲೂಯೆನ್ಸರ್ ಲೀನಾ ನಾಗವಂಶಿ ಅವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಛತ್ತೀಸ್ಗಢದ ರಾಯ್ಗಢದಲ್ಲಿರುವ ತಮ್ಮ ನಿವಾಸದಲ್ಲಿ ಲೀನಾ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಲೀನಾ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದು, ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ಸಿಗಲಿದೆ.
ದ್ವಿತೀಯ ವರ್ಷದ ಬಿ.ಕಾಂ ಪದವೀಧರೆಯಾಗಿರುವ ಲೀನಾ ರಾಯ್ಗಢದ ವಿಹಾರ್ ಕಾಲೋನಿಯಲ್ಲಿ ವಾಸವಾಗಿದ್ದರು. ಲೀನಾ ಅವರು ಯೂಟ್ಯೂಬ್ ಸೇರಿ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಗಳಿಸಿದ್ದಾರೆ.
ಇನ್ಸ್ಟಾದಲ್ಲಿ ಸುಮಾರು 10 ಸಾವಿರ ಫಾಲೋವರ್ ಗಳನ್ನು ಇವರು ಹೊಂದಿದ್ದಾರೆ. ಈಕೆ ಶಾರ್ಟ್ ವೀಡಿಯೋ ಹಾಗೂ ರೀಲ್ಸ್ ಗಳನ್ನು ಮಾಡುವ ಮೂಲಕ ಫೇಮ್ಸ ಆಗಿದ್ದರು. ಈ ಮೂಲಕ ಜನರಿಗೂ ಚಿರಪರಿಚಿತರಾಗಿದ್ದರು.
22 ವರ್ಷ ವಯಸ್ಸಿನ ಸೋಷಿಯಲ್ ಮೀಡಿಯಾ ಇನ್ಫ್ಲೂಯೆನ್ಸರ್ ಲೀನಾ ನಾಗವಂಶಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಕ್ರಧಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತದೇಹವನ್ನು ಪೋಸ್ಟ್ ಮಾರ್ಟಮ್ಗೆ ಕಳುಹಿಸಲಾಗಿದೆ ಎಂದು ಚಕ್ರಧಾರ್ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಇಂಗೇಶ್ವರ್ ಯಾದವ್ ಮಾಹಿತಿ ನೀಡಿದ್ದಾರೆʼʼ ಎಂದು ಎಎನ್ ಐ ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


