ಗ್ಯಾಂಗ್'ಸ್ಟರ್ ಡ್ರಾಮಾ 'ಹೆಡ್ ಬುಷ್' ಚಿತ್ರ ಅಕ್ಟೋಬರ್ 21ಕ್ಕೆ ಬಿಡುಗಡೆ
ಡಾಲಿ ಧನಂಜಯ್ ಅಭಿನಯದ ಹೆಡ್ ಬುಷ್ ಚಿತ್ರ ಅಕ್ಟೋಬರ್ 21 ರಂದು ಬಿಡುಗಡೆಯಾಗಲಿದೆ.

ಡಾಲಿ ಧನಂಜಯ್ ಅಭಿನಯದ ಹೆಡ್ ಬುಷ್ ಚಿತ್ರ ಅಕ್ಟೋಬರ್ 21 ರಂದು ಬಿಡುಗಡೆಯಾಗಲಿದೆ.
ಬೆಂಗಳೂರಿನ ಒಂದು ಕಾಲದ ಭೂಗತ ದೊರೆ ಡಾನ್ ಎಂ.ಪಿ ಜಯರಾಜ್ ಅವರ ಜೀವನಾಧಾರಿತ ಚಿತ್ರ ಇದಾಗಿದ್ದು, ಸಿನಿಮಾವನ್ನು ಅಕ್ಟೋಬರ್ 21ರ ದೀಪಾವಳಿ ಹಬ್ಬದಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.
ಪಾಯಲ್ ರಜಪೂತ್ ಸ್ಯಾಂಡಲ್ವುಡ್"ಗೆ ಪಾದಾರ್ಪಣೆ ಮಾಡುತ್ತಿರುವ ಮೊದಲ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನೀಡುತ್ತಿದ್ದು, ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್, ಲೂಸ್ ಮಾದ ಖ್ಯಾತಿಯ ಯೋಗಿ, ರಘು ಮುಖರ್ಜಿ, ವಸಿಷ್ಟ ಎನ್ ಸಿಂಹ, ಮತ್ತು ಬಾಲು ನಾಗೇಂದ್ರ ನಟಿಸಿದ್ದಾರೆ.
ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಮೂಲಕ ಚಿತ್ರ ನಿರ್ಮಾಣವಾಗಿದ್ದು, ಕೆಆರ್'ಡಿ ಸ್ಟುಡಿಯೋಸ್ ಚಿತ್ರ ವಿತರಣೆ ಮಾಡಲಿದೆ.
ಈ ನಡುವೆ ಧನಂಜಯ್ ಅಭಿಯನಯದ ಹಲವು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿ ನಿಂತಿವೆ. ಡಾಲಿ ಧನಂಜಯ್ ಅವರನ್ನು ಮುಂದೆ ಶಿವರಾಜ್ ಕುಮಾರ್ ಅಭಿನಯದ ಭೈರಾಗಿ ಚಿತ್ರದಲ್ಲಿ ನೋಡಬಹುದಾಗಿದೆ. ಈ ಚಿತ್ರ ಜುಲೈ.1 ಬಿಡುಗಡೆಯಾಗಲಿದೆ. ಇದಷ್ಟೇ ಅಲ್ಲಗೆ, ಆಗಸ್ಟ್ 12 ಮತ್ತು ಸೆಪ್ಟೆಂಬರ್ 9 ರಂದು ಬಿಡುಗಡೆಯಾಗಲಿರುವ ಮಾನ್ಸೂನ್ ರಾಗ ಹಾಗೂ ಜಮಾಲಿಗುಡ್ಡದಲ್ಲಿಯೂ ಧನಂಜಯ್ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


