ಸಿನಿಮಾ ಸುದ್ದಿ

'ಹಿಂದೆ ನನ್ನ ಬೈದವರೆಲ್ಲ ಚೆಂದಾಗಿರಲಿ, ಮುಂದೆ ನನ್ನ ಬಯ್ಯುವರೆಲ್ಲ ಅಂದಣವೇರಲಿ, ಕುಂದು ಇಟ್ಟವರೆಲ್ಲ ಕುದುರೆಯ ಕಟ್ಟಿ ಬಾಳಲಿ'

ಹೆಡ್ ಬುಷ್ ಸಿನಿಮಾ ವಿವಾದದಿಂದ ದೂರವಾಗಿ, ಹೊಯ್ಸಳ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟ ಡಾಲಿ ಧನಂಜಯ್, ತಮ್ಮ ಬದುಕಿಗೂ ಮತ್ತು ಕನಕದಾಸರ ಪದಕ್ಕೂ ಹೋಲಿಕೆ ಮಾಡಿಕೊಂಡು ಪೋಸ್ಟ್ ಮಾಡಿದ್ದಾರೆ.

'ಹಿಂದೆ ನನ್ನ ಬೈದವರೆಲ್ಲ ಚೆಂದಾಗಿರಲಿ, ಮುಂದೆ ನನ್ನ ಬಯ್ಯುವರೆಲ್ಲ ಅಂದಣವೇರಲಿ, ಕುಂದು ಇಟ್ಟವರೆಲ್ಲ ಕುದುರೆಯ ಕಟ್ಟಿ ಬಾಳಲಿ'
ಧನಂಜಯ್
Published On :

ಹೆಡ್ ಬುಷ್ ಸಿನಿಮಾ ವಿವಾದದಿಂದ ದೂರವಾಗಿ, ಹೊಯ್ಸಳ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟ ಡಾಲಿ ಧನಂಜಯ್, ತಮ್ಮ ಬದುಕಿಗೂ ಮತ್ತು ಕನಕದಾಸರ ಪದಕ್ಕೂ ಹೋಲಿಕೆ ಮಾಡಿಕೊಂಡು ಪೋಸ್ಟ್ ಮಾಡಿದ್ದಾರೆ.

ಅದು ಕನಕದಾಸರ ರಚನೆಯಾದರೂ, ಧನಂಜಯ್ ತಮ್ಮ ವೈರಿಗಳಿಗೆ ಈ ಮೂಲಕ ಟಾಂಗ್ ಕೊಟ್ಟಿದ್ದಾರೆ. ಇತ್ತೀಚಿಗೆ ಡಾಲಿ ವೃತ್ತಿ ಜೀವನದಲ್ಲಿ ನಡೆದ ಘಟನೆಯನ್ನು ನೆನಪಿಸುತ್ತಲೇ, ತಮ್ಮ ಬಗ್ಗೆ ಸಲ್ಲದ ಆರೋಪಗಳನ್ನು ಮಾಡುವವರಿಗೆ ಈ ಮೂಲಕ ಎಚ್ಚರಿಸಿದ್ದಾರೆ.

ಹೆಡ್ ಬುಷ್ ಸಿನಿಮಾದಲ್ಲಿ ವೀರಗಾಸೆಗೆ ಅಪಮಾನ ಮಾಡಿದ್ದಾರೆ ಎಂದು ವಿವಾದ ಸೃಷ್ಟಿ ಮಾಡಲಾಯಿತು. ಕರಗದ ವಿಚಾರದಲ್ಲೂ ಎಳೆತರಲಾಯಿತು. ಬಡವರ ಮಕ್ಳು ಬೆಳೆಯಬೇಕು ಎನ್ನುವ ಅವರ ಮಾತನ್ನು ಟ್ರೋಲ್ ಮಾಡಲಾಯಿತು. ತಮ್ಮ ವಿರುದ್ಧ ಷಡ್ಯಂತ್ರ ಮಾಡುತ್ತಿರುವ ಎಲ್ಲರಿಗೂ ಈ ಕನಕದಾಸರ ರಚನೆಯ ಮೂಲಕ ಉತ್ತರಿಸಿದ್ದಾರೆ ಧನಂಜಯ್.

ಹಿಂದೆ ನನ್ನ ಬೈದವರೆಲ್ಲ ಚೆಂದಾಗಿರಲಿ, ಮುಂದೆ ನನ್ನ ಬಯ್ಯುವರೆಲ್ಲ ಅಂದಣವೇರಲಿ, ಕುಂದು ಇಟ್ಟವರೆಲ್ಲ ಕುದುರೆಯ ಕಟ್ಟಿ ಬಾಳಲಿ, ಬಂದು ಒದ್ದವರಿಗೆ ಭತ್ತದ ಗದ್ದೆ ಬೆಳೆಯಲಿ. ಜನರೊಳಗೆ ಮಾನಭಂಗ ಮಾಡಿದವರಿಗೆ ಜೇನು ತುಪ್ಪು, ಸಕ್ಕರೆ ಊಟ ಆಗಲಿ ಅವರಿಗೆ. ಹಾನಿ ಬಾರದಂತಹ ಲೋಕ ಆಗಲಿ ಅವರಿಗೆ. ಮಹಾನುಭಾವ ಮುಕ್ತಿಯ ಕೊಡುವ ನೆಲೆಯಾದಿಕೇಶವ’ ಎಂದು ದಾಸರಪದವನ್ನು ಹಾಕುವ ಮೂಲಕ ತಮಗೆಲ್ಲ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.

ಏನು ಒಲ್ಲೆ ಹರಿಯೇ ನಿನ್ನ ಸ್ತುತಿಸಿ ಕೇಳುವುದು ,ಜ್ಞಾನಭಕ್ತಿ ಕೊಡು ಯಮಗೆ ಇದೊಂದೇ ದೊಡ್ಡದು, ಒಂದು ನೆವದಿಂದ ಎನ್ನ ಕಾಡಿದವರಿಗೆ, ಹೊನ್ನು ಹೆಣ್ಣು ಗಂಡು ಮಕ್ಕಳು ಆಗಲಿ ಅವರಿಗೆ, ಕಂದಿ ಕುಂದಿ ಯನ್ನ  ಬಾಧೆ ಪಡಿಸಿದವರಿಗೆ ಕನ್ಯದಾನದ  ಫಲ ಬಂದು ತಟ್ಟಲಿ ಅವರಿಗೆ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.