'ಬ್ಯಾಡ್ ಮ್ಯಾನರ್ಸ್' ನಲ್ಲಿ ಅಭಿಷೇಕ್ ಅಂಬರೀಷ್ ಗೆ 'ರುದ್ರ' ಪೊಲೀಸ್ ಅಧಿಕಾರಿ ಪಾತ್ರ
ಅಭಿಷೇಕ್ ಅಂಬರೀಷ್ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬ್ಯಾಡ್ ಮ್ಯಾನರ್ಸ್ ಚಿತ್ರ ತಂಡ ಟೀಸರ್ ರಿಲೀಸ್ ಮಾಡಿದೆ. ಇದೊಂದು ಆ್ಯಕ್ಷನ್ ಪ್ಯಾಕ್ಡ್ ಫಿಲ್ಮ್ ಆಗಿದ್ದು, ಟೀಸರ್ ರಿಲೀಸ್ ಆದ ಕೆಲವೆ ಗಂಟೆಗಳಲ್ಲಿ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಪಡೆದಿದೆ.

ಅಭಿಷೇಕ್ ಅಂಬರೀಷ್ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬ್ಯಾಡ್ ಮ್ಯಾನರ್ಸ್ ಚಿತ್ರ ತಂಡ ಟೀಸರ್ ರಿಲೀಸ್ ಮಾಡಿದೆ. ಇದೊಂದು ಆ್ಯಕ್ಷನ್ ಪ್ಯಾಕ್ಡ್ ಫಿಲ್ಮ್ ಆಗಿದ್ದು, ಟೀಸರ್ ರಿಲೀಸ್ ಆದ ಕೆಲವೆ ಗಂಟೆಗಳಲ್ಲಿ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಪಡೆದಿದೆ.
ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಅಭಿಷೇಕ್ ಅಂಬರೀಷ್ ರುದ್ರ ಎಂಬ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ರಚಿತಾ ರಾಮ್ ಮತ್ತು ಪ್ರಿಯಾಂಕಾ ಕುಮಾರ್ ಕೂಡ ನಟಿಸಿದ್ದಾರೆ.
ದುನಿಯಾ, ಟಗರು, ಮತ್ತು ಪಾಪ್ಕಾರ್ನ್ ಮಂಕಿ ಟೈಗರ್ ಚಿತ್ರಗಳಿಗೆ ಹೆಸರುವಾಸಿಯಾಗಿರುವ ಸೂರಿ ಅವರ ಮುಂಬರುವ ಚಿತ್ರವು ಪ್ರೇಕ್ಷಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ. ಬ್ಯಾಡ್ ಮ್ಯಾನರ್ಸ್ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಕೆಲವು ಪ್ಯಾಚ್ವರ್ಕ್ ದೃಶ್ಯಗಳನ್ನು ಚಿತ್ರೀಕರಿಸಬೇಕಾಗಿದೆ. ಇಂಟ್ರೋ ಟ್ರ್ಯಾಕ್ ಅನ್ನು ಧನು ಕೊರಿಯೋಗ್ರಫಿ ಮಾಡಲಿದ್ದು, ಅಕ್ಟೋಬರ್ 10 ರಿಂದ ಚಿತ್ರೀಕರಣ ನಡೆಯಲಿದೆ.
ಚರಣ್ ರಾಜ್ ಸಂಗೀತ ಸಂಯೋಜಿಸಿದ್ದು, ಬ್ಯಾಡ್ ಮ್ಯಾನರ್ಸ್ ಚಿತ್ರಕ್ಕೆ ಶೇಖರ್ ಎಸ್ ಅವರ ಛಾಯಾಗ್ರಹಣವಿದೆ. ಏತನ್ಮಧ್ಯೆ, ಅಭಿಷೇಕ್ ನಿರ್ದೇಶಕ ಕೃಷ್ಣ ಅವರ ಮುಂಬರುವ ಚಿತ್ರ ಕಾಲಿಗೆ ಸಜ್ಜಾಗುತ್ತಿದ್ದಾರೆ, ಇದು ನವೆಂಬರ್ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲಿದೆ.
ನಿರ್ದೇಶಕ ಮಹೇಶ್ ಕುಮಾರ್ ಮತ್ತು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರೊಂದಿಗೆ ತಾತ್ಕಾಲಿಕವಾಗಿ AA04 ಎಂದು ಹೆಸರಿಸಲಾದ ಚಿತ್ರದಲ್ಲೂ ನಟಿಸುತ್ತಿದ್ದಾರೆ, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


