ಸಿನಿಮಾ ಸುದ್ದಿ

ಪುನೀತ್ ರಾಜಕುಮಾರ್ ಅಭಿಯನದ ಗಂಧದ ಗುಡಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಬೊಮ್ಮಾಯಿ!

ದಿವಂಗತ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಚಿತ್ರಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.

ಪುನೀತ್ ರಾಜಕುಮಾರ್ ಅಭಿಯನದ ಗಂಧದ ಗುಡಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಬೊಮ್ಮಾಯಿ!
ಪುನೀತ್ ರಾಜಕುಮಾರ್
Published On :

ಬೆಂಗಳೂರು: ದಿವಂಗತ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಚಿತ್ರಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.

ಇಂದು ಅರಮನೆ ಮೈದಾನದಲ್ಲಿ ಗಂಧದ ಗುಡಿ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮ ಪುನೀತ್ ಪರ್ವ ಅದ್ಧೂರಿಯಾಗಿ ನಡೆಯಿತು. ಈ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಬೊಮ್ಮಾಯಿ ಅವರು ತೆರಿಗೆ ವಿನಾಯ್ತಿ ಘೋಷಣೆ ಮಾಡಿದ್ದಾರೆ. 

ಇದು ಯುವ ಜನತೆಗೆ ಮಾದರಿ ಆಗುವಂತಹ ಸಾಕ್ಷ್ಯಚಿತ್ರ ಆದ್ದರಿಂದ ಅದಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಇದು ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​. ಅ.28ರಂದು 'ಗಂಧದ ಗುಡಿ' ರಿಲೀಸ್​ ಆಗಲಿದೆ. ಕೆಆರ್ ಜಿ ಸ್ಟುಡಿಯೋ ಈ ಚಿತ್ರವನ್ನು ಎಲ್ಲಾ ಭಾಷೆಗಳಲ್ಲೂ ಬಿಡುಗಡೆ ಮಾಡುತ್ತಿದೆ.

ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಭಾರತೀಯ ಚಿತ್ರರಂಗದ ಅನೇಕಾ ಖ್ಯಾತನಾಮರು ಪಾಲ್ಗೊಂಡಿದ್ದು ಪುನೀತ್ ಜೊತೆಗಿನ ತಮ್ಮ ಒಡನಾಟವನ್ನು ಹಂಚಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ ಕುಟುಂಬದವರು, ಕನ್ನಡ ನಟ, ನಟಿಯರು, ತಮಿಳಿನ ನಟ ಸೂರ್ಯ, ಪ್ರಕಾಶ್ ರಾಜ್, ಅಖಿಲ್ ಅಕ್ಕಿನೇನಿ, ಸಿದ್ಧಾರ್ಥ್, ರಾಣಾ ದಗ್ಗುಬಾಟಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.