ಸಿನಿಮಾ ಸುದ್ದಿ

ಮೇಘನಾ ರಾಜ್ ಸರ್ಜಾ ಕಮ್ ಬ್ಯಾಕ್ ಸಿನಿಮಾದಲ್ಲಿ ನಟ ಪ್ರಜ್ವಲ್ ದೇವರಾಜ್ ವಿಶೇಷ ಪಾತ್ರ!

ಸ್ಯಾಂಡಲ್ ವುಡ್ ನಟಿ ಮೇಘನಾರಾಜ್ ಸರ್ಜಾ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ವಿಶಾಲ್ ಚೊಚ್ಚಲ ನಿರ್ದೇಶನದ ಕ್ರೈಮ್ ಥ್ರಿಲ್ಲರ್ ಸಿನಿಮಾವನ್ನು ಪನ್ನಾಗಭರಣ ನಿರ್ಮಾಣ ಮಾಡುತ್ತಿದ್ದಾರೆ.

ಮೇಘನಾ ರಾಜ್ ಸರ್ಜಾ ಕಮ್ ಬ್ಯಾಕ್ ಸಿನಿಮಾದಲ್ಲಿ ನಟ ಪ್ರಜ್ವಲ್ ದೇವರಾಜ್ ವಿಶೇಷ ಪಾತ್ರ!
ಪ್ರಜ್ವಲ್ ದೇವರಾಜ್
Published On :

ಸ್ಯಾಂಡಲ್ ವುಡ್ ನಟಿ ಮೇಘನಾರಾಜ್ ಸರ್ಜಾ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ವಿಶಾಲ್ ಚೊಚ್ಚಲ ನಿರ್ದೇಶನದ ಕ್ರೈಮ್  ಥ್ರಿಲ್ಲರ್ ಸಿನಿಮಾವನ್ನು ಪನ್ನಾಗಭರಣ ನಿರ್ಮಾಣ ಮಾಡುತ್ತಿದ್ದಾರೆ.

ಸದ್ಯ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು ಡೈನಾಮಿಕ್ಸ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಪೊಲೀಸ್ ಪಾತ್ರಗಲ್ಲಿ ಪ್ರಜ್ವಲ್ ನಟಿಸುತ್ತಿದ್ದು, ತಮ್ಮ ಭಾಗದ ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ.

ಹ್ಯಾಪಿ ನ್ಯೂ ಇಯರ್ ಮತ್ತು ಪ್ರೆಂಚ್ ಬಿರಿಯಾನಿ ನಿರ್ದೇಶಿಸಿರುವ ಪನ್ನಗಾಭರಣ ಈ ಸಿನಿಮಾ ಮೂಲಕ ನಿರ್ಮಾಪಕರಾಗಿ ಬಡ್ತಿ ಹೊಂದುತ್ತಿದ್ದಾರೆ, ಸಿನಿಮಾಗೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ.

ಸಿನಿಮಾ ಶೀರ್ಷಿಕೆ ಮತ್ತು ಉಳಿದ ಪಾತ್ರವರ್ಗದ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಮೇಘನಾ ಕೈಯ್ಯಲ್ಲಿ ಬುದ್ಧಿವಂತ 2 ಚಿತ್ರವಿದೆ.

ಪ್ರಜ್ವಲ್ ದೇವರಾಜ್, ಲೋಹಿತ್ ಎಸ್ ನಿರ್ದೇಶನದ ಮಾಫಿಯಾ ಚಿತ್ರೀಕರಣವನ್ನು ಬಹುತೇಕ ಮುಗಿಸಿದ್ದಾರೆ. ಖಾದರ್ ಕುಮಾರ್ ಅವರ ವೀರಂ ಮತ್ತು ಹರಿಪ್ರಸಾದ್ ಜಕ್ಕಾ ಅವರ ಗಣ ಕೂಡ ನಿರ್ಮಾಣದ ವಿವಿಧ ಹಂತಗಳಲ್ಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.