ಕಿಚ್ಚ ರಾಜಕೀಯ ಪ್ರವೇಶ ಬೆನ್ನಲ್ಲೆ ಬಂತು ಬೆದರಿಕೆ: ಸುದೀಪ್ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರದಲ್ಲಿ ಎಚ್ಚರಿಕೆ; ಪುಟ್ಟೇನಹಳ್ಳಿ ಪೊಲೀಸರಿಂದ ತನಿಖೆ!
ನಟ ಸುದೀಪ್ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಎರಡು ಬೆದರಿಕೆ ಪತ್ರ ಬಂದಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

ಬೆಂಗಳೂರು: ನಟ ಸುದೀಪ್ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಎರಡು ಬೆದರಿಕೆ ಪತ್ರ ಬಂದಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.
ಈ ಪತ್ರದಲ್ಲಿ ಕಿಚ್ಚ ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದು, ಪತ್ರದ ಮೂಲಕ್ಕಾಗಿ ಶೋಧ ನಡೆಯುತ್ತಿದೆ.
ಸುದೀಪ್ ಮ್ಯಾನೇಜರ್ ಮಂಜುನಾಥ್ ಅವರಿಗೆ ಈ ಪತ್ರ ಸಿಕ್ಕಿದೆ ಎನ್ನಲಾಗಿದ್ದು, ಈ ಪತ್ರದಲ್ಲಿ ಸುದೀಪ್ ಬಗ್ಗೆ ಕೆಟ್ಟ ಪದಗಳ ಬಳಕೆ ಆಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವ ಬೆದರಿಕೆ ಹಾಕಲಾಗಿದೆ. ಇದರಿಂದ ಸುದೀಪ್ಗೆ ಮಾನಸಿಕ ಕಿರುಕುಳ ಉಂಟಾಗಿದ್ದು, ನಟನ ಘನತೆಗೆ ಧಕ್ಕೆ ತರಲು ಮಾಡಿರುವ ಸಂಚು ಎಂದು ಮಂಜುನಾಥ್ ಅವರು ದೂರಿದ್ದಾರೆ.
ಸದ್ಯ ಪುಟ್ಟೇನಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 506, ಸೆಕ್ಷನ್ 504 ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಈ ಪತ್ರ ಎಲ್ಲಿಂದ ಬಂತು, ಯಾರು ಕಳುಹಿಸಿದ್ದು ಎನ್ನುವ ತನಿಖೆ ನಡೆಯುತ್ತಿದೆ. ಈ ಪ್ರಕರಣವನ್ನು ಸಿಸಿಬಿಗೆ ವಹಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಸುದೀಪ್ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಲಿದ್ದಾರೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಈ ಬೆದರಿಕೆ ಪತ್ರ ಬಂದಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


