ಶ್ರೇಯಸ್ ಮಂಜು- ಪ್ರಿಯಾ ವಾರಿಯರ್ ನಟನೆಯ 'ವಿಷ್ಣು ಪ್ರಿಯ' ಚಿತ್ರದ ಕ್ಲೈಮ್ಯಾಕ್ಸ್ ಮರುಚಿತ್ರೀಕರಣ
ಶ್ರೇಯಸ್ ಮಂಜು ಅವರ ಮುಂದಿನ ವಿಷ್ಣು ಪ್ರಿಯಾ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ ಮತ್ತು ಚಿತ್ರತಂಡ ಇತ್ತೀಚೆಗಷ್ಟೇ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ಹೊಸ ಮಾಹಿತಿ ಎಂದರೆ, ಚಿತ್ರತಂಡ ಚಿತ್ರದ ಕ್ಲೈಮ್ಯಾಕ್ಸ್ ಅನ್ನು ರೀಶೂಟ್ ಮಾಡಿದೆ.

ಶ್ರೇಯಸ್ ಮಂಜು ಅವರ ಮುಂದಿನ ವಿಷ್ಣು ಪ್ರಿಯಾ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ ಮತ್ತು ಚಿತ್ರತಂಡ ಇತ್ತೀಚೆಗಷ್ಟೇ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದೆ.
ಇದರ ಹೊರತಾಗಿ, ಸಿನಿಮಾಗೆ ಬಂಡವಾಳ ಹೂಡಿರುವ ನಿರ್ಮಾಪಕ ಕೆ ಮಂಜು, ಕ್ಲೈಮ್ಯಾಕ್ಸ್ ಅನ್ನು ರೀಶೂಟ್ ಮಾಡಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. 'ನಾವು ಕ್ಲೈಮ್ಯಾಕ್ಸ್ ಮೂಡಿಬಂದಿದ್ದ ಬಗ್ಗೆ ತೃಪ್ತರಾಗಿರಲಿಲ್ಲ, ಆದ್ದರಿಂದ ನಾವು ಮರುಚಿತ್ರೀಕರಣ ನಡೆಸಿದ್ದೇವೆ' ಎಂದು ಜೂನ್ನಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸುತ್ತಿರುವ ಮಂಜು ಹೇಳುತ್ತಾರೆ.
ಮಲಯಾಳಂ, ತೆಲುಗು ಮತ್ತು ತಮಿಳಿನಲ್ಲಿ ಚಿತ್ರಗಳನ್ನು ನಿರ್ದೇಶಿಸಿರುವ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ವಿಕೆ ಪ್ರಕಾಶ್ ಅವರು ವಿಷ್ಣು ಪ್ರಿಯಾ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ರೊಮ್ಯಾಂಟಿಕ್ ಸಿನಿಮಾ ಮೂಲಕ ಕಣ್ಸನ್ನೆ ಬೆಡಗಿ ಮಲಯಾಳಂನ ನಟಿ ಪ್ರಿಯಾ ವಾರಿಯರ್ ಕನ್ನಡಕ್ಕೆ ಪದಾರ್ಪಣೆ ಮಾಡಿದ್ದಾರೆ.
65 ಕಥೆಗಳಲ್ಲಿ ಆಯ್ಕೆಯಾದ ಧಾರವಾಡದ ಸಿಂಧುಶ್ರೀ ಬರೆದ ಕಥೆಯನ್ನು ಆಧರಿಸಿ ವಿಷ್ಣು ಪ್ರಿಯಾ ಸಿನಿಮಾವನ್ನು ಮಾಡಲಾಗಿದೆ.
90ರ ದಶಕದಲ್ಲಿ ನಡೆಯುವ ವಿಷ್ಣು ಪ್ರಿಯಾ ಒಂದು ರೋಮ್ಯಾಂಟಿಕ್ ಚಿತ್ರವಾಗಿದ್ದು, ಅದು ಕೌಟುಂಬಿಕ ಮೌಲ್ಯಗಳ ಮೇಲೆ ನಿಂತಿರುತ್ತದೆ. ಗೋಪಿ ಸುಂದರ್ ಸಂಗೀತ ಸಂಯೋಜಿಸಿದ್ದರೆ, ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


