ಸಿನಿಮಾ ಸುದ್ದಿ

ಪವನ್ ಕುಮಾರ್ ನಿರ್ದೇಶನದ ಫಾಸಿಲ್ ಅಭಿನಯದ ಧೂಮಮ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಮಲಯಾಳಂ ನಟ ಫಹದ್ ಫಾಸಿಲ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಧೂಮಮ್‌ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ನಿರ್ಮಾಪಕರು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ.

ಪವನ್ ಕುಮಾರ್ ನಿರ್ದೇಶನದ ಫಾಸಿಲ್ ಅಭಿನಯದ ಧೂಮಮ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ
ಧೂಮಮ್ ಚಿತ್ರದ ಪೋಸ್ಟರ್
Published On :

ಮಲಯಾಳಂ ನಟ ಫಹದ್ ಫಾಸಿಲ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಧೂಮಮ್‌ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ನಿರ್ಮಾಪಕರು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ.

ಧೂಮಮ್ ಚಿತ್ರವನ್ನು ಕನ್ನಡದ ಪವನ್ ಕುಮಾರ್ ನಿರ್ದೇಶಿಸಿದ್ದಾರೆ. ಇನ್ನು ಕೆಜಿಎಫ್ ಮತ್ತು ಕಾಂತಾರವನ್ನು ನಿರ್ಮಿಸಿದ ಪ್ರೊಡಕ್ಷನ್ ಹೌಸ್ ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ಫಹದ್ ಫಾಸಿಲ್ ಅವರ ಹಣೆಯ ಮೇಲೆ ಗಾಯದ ಗುರುತಿದೆ. ಅಲ್ಲದೆ ಅವರ ಬಾಯಿಗೆ ಟೇಪ್ ಹಾಕಲಾಗಿದೆ. ಪೋಸ್ಟರ್ ನ ಹಿನ್ನಲೆಯಲ್ಲಿ ಉಳಿದ ಪಾತ್ರವರ್ಗವನ್ನು ಸಹ ನೋಡಬಹುದು.

ಪ್ಯಾನ್ ಇಂಡಿಯಾ ಚಿತ್ರವಾಗಿರುವ ಧೂಮಮ್ ಚಿತ್ರದಲ್ಲಿ ರೋಷನ್ ಮ್ಯಾಥ್ಯೂ, ಅಪರ್ಣಾ ಬಾಲಮುರಳಿ, ವಿನೀತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. 'ಇದು ವಿಭಿನ್ನ ಕಾಲಾವಧಿಯಲ್ಲಿ ನಡೆಯುವ ಕಥೆಯಾಗಿದೆ ಎಂದು ರೋಶನ್ ಮ್ಯಾಥ್ಯೂ ಈ ಹಿಂದೆ ಸಿನಿಮಾ ಎಕ್ಸ್ ಪ್ರೆಸ್ ಗೆ ಬಹಿರಂಗಪಡಿಸಿದ್ದರು.

ಪವನ್ ಕುಮಾರ್ ನಿರ್ದೇಶನದ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸುತ್ತಿದ್ದು, ಪ್ರೀತಾ ಜಯರಾಮನ್ ಅವರ ಛಾಯಾಗ್ರಹಣವಿರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.