ಸಿನಿಮಾ ಸುದ್ದಿ

'ತತ್ಸಮ- ತದ್ಭವ' ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ ನಟಿ ಮೇಘನಾ ರಾಜ್

ನಟಿ ಮೇಘನ ರಾಜ್ ಕೆಲ ವರ್ಷಗಳಿಂದ ಯಾವುದೇ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ಈಗ ‘ತತ್ಸಮ ತದ್ಭವ’ ಚಿತ್ರದ ಮೂಲಕ ಮೇಘನರಾಜ್ ರೀ ಎಂಟ್ರಿ ಕೊಟ್ಟಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

'ತತ್ಸಮ- ತದ್ಭವ' ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ ನಟಿ ಮೇಘನಾ ರಾಜ್
ತತ್ಸಮ ತದ್ಭವ ಸಿನಿಮಾ ತಂಡ
Published On :

ನಟಿ ಮೇಘನ ರಾಜ್ ಕೆಲ ವರ್ಷಗಳಿಂದ ಯಾವುದೇ ಚಿತ್ರದಲ್ಲಿ ಅಭಿನಯಿಸಿರಲಿಲ್ಲ. ಈಗ ‘ತತ್ಸಮ ತದ್ಭವ’ ಚಿತ್ರದ ಮೂಲಕ ಮೇಘನರಾಜ್ ರೀ ಎಂಟ್ರಿ ಕೊಟ್ಟಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ತತ್ಸಮ ತದ್ಭವ ಚಿತ್ರದ ಮೂಲಕ ಮೇಘನಾ ರಾಜ್ ಸರ್ಜಾ ಮತ್ತೆ ನಟನೆಗೆ ಮರಳುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ಇದೀಗ ಚಿತ್ರದ ಚಿತ್ರೀಕರಣ ಮುಗಿಸಿರುವುದಾಗಿ ನಿರ್ಮಾಪಕರು ಘೋಷಿಸಿದ್ದಾರೆ.

‘ನಿಜವಾದ ಸ್ನೇಹಿತರು ಯಾವಾಗಲೂ ಜೊತೆಗಿರುತ್ತಾರೆ. ಅಂತಹ ಸ್ನೇಹಿತರು ನನಗಿದ್ದಾರೆ. ನನಗಾಗಿ ಈ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರು ಪ್ರವೇಶ ಮಾಡಿದ್ದೇನೆ. ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ನಿರ್ಮಾಣ ಮಾಡಿದ್ದಾರೆ. ವಿಶಾಲ್ ಆತ್ರೇಯ ಒಳ್ಳೆಯ ಕಥೆ ಮಾಡಿಕೊಂಡು ನಿರ್ದೇಶನ ಮಾಡಿದ್ದಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಈವರೆಗೂ ನಾನು ಇಂತಹ ಪಾತ್ರ ಮಾಡಿಲ್ಲ. ಮುಂದೆ ಮಾಡುತ್ತೀನೊ, ಇಲ್ಲವೊ? ಗೊತ್ತಿಲ್ಲ ಎಂದರು ಮೇಘನರಾಜ್.

ನನಗೆ ನಿರ್ದೇಶಕರು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಕಥೆಯಲ್ಲಿ  ಒಂದು ಮುಖ್ಯಪಾತ್ರ ಬರುತ್ತದೆ. ಈ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ಕೇಳಿದೆ. ಅವರು ನೀವೆ ಮಾಡುತ್ತಿದ್ದೀರ ಎಂದರು. ಸ್ನೇಹಿತರ ಸಿನಿಮಾ‌ದಲ್ಲಿ ಅಭಿನಯಿಸಿದ ಖುಷಿಯಿದೆ  ಎಂದು ಪ್ರಜ್ವಲ್ ದೇವರಾಜ್ ತಿಳಿಸಿದರು.

ಸಮಾಜದಲ್ಲಿ ಯಾವುದೇ ಹೆಣ್ಣಿಗಾದರೂ ಅನುಕಂಪಕ್ಕಿಂತ, ಅವಕಾಶ ಕೊಡುವುದು ಮುಖ್ಯ. ಮೇಘನಾ ರಾಜ್ ವಿಷಯದಲ್ಲಿ, ಅವರ ಸ್ನೇಹಿತರೆಲ್ಲರೂ ಸೇರಿ ಅವರ ರೀ ಎಂಟ್ರಿಗೆ ಒಳ್ಳೆಯ ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿಸಿ, ನಾನು ಈ ಚಿತ್ರದಲ್ಲಿ ಮನಶಾಸ್ತ್ರಜ್ಞೆಯಾಗಿ ಕಾಣಿಸಿಕೊಂಡಿದ್ದೇನೆ ಎಂದರು. ಚಿತ್ರದಲ್ಲಿ ಒಂದು ಹಾಡಿದೆ. ರೀರೆರ್ಡಿಂಗ್ ಕೆಲಸ ನಡೆಯುತ್ತಿದೆ ಎಂದು ಸಂಗೀತ ನಿರ್ದೇಶಕ ವಾಸುಕಿ ವೈಭವ್ ಹೇಳಿದರು.

ವಾಸುಕಿ ವೈಭವ್ ಸಿನಿಮಾಗೆ ಸಂಗೀತ ನೀಡಿದ್ದಾರೆ. ರಾಜ್ಯ  ವಿಧಾವಸಭೆ ಚುನಾವಣೆಯ ನಂತರ ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.