ಸ್ಕ್ಯಾಮ್-1770 ಚಿತ್ರದ ಟೀಸರ್ ರಿಲೀಸ್ ಮಾಡಿದ ಹಿರಿಯ ನಟ ದತ್ತಣ್ಣ
ನಮ್ಮ ಕಾಲದ ಶಿಕ್ಷಣ ವ್ಯವಸ್ಥೆಗೂ ಈಗಿನ ಶಿಕ್ಷಣ ವ್ಯವಸ್ಥೆಗೂ ಸಾಕಷ್ಟು ವ್ಯತ್ಯಾಸವಿದೆ. ಆಗ 92 ಅಂಕ ಪಡೆದರೆ ಅವರೆ ಮೊದಲು. ಈಗ 99 ಬಂದರೂ ಸಾಕಾಗುವುದಿಲ್ಲ ಎಂದು ಹಿರಿಯ ನಟ ದತ್ತಣ್ಣ ಅಭಿಪ್ರಾಯ ಪಟ್ಟಿದ್ದಾರೆ.

ನಮ್ಮ ಕಾಲದ ಶಿಕ್ಷಣ ವ್ಯವಸ್ಥೆಗೂ ಈಗಿನ ಶಿಕ್ಷಣ ವ್ಯವಸ್ಥೆಗೂ ಸಾಕಷ್ಟು ವ್ಯತ್ಯಾಸವಿದೆ. ಆಗ 92 ಅಂಕ ಪಡೆದರೆ ಅವರೆ ಮೊದಲು. ಈಗ 99 ಬಂದರೂ ಸಾಕಾಗುವುದಿಲ್ಲ ಎಂದು ಹಿರಿಯ ನಟ ದತ್ತಣ್ಣ ಅಭಿಪ್ರಾಯ ಪಟ್ಟಿದ್ದಾರೆ.
ಸ್ಕ್ಯಾಮ್ 1770 ಸಿನಿಮಾ ಟೀಸರ್ ಬಿಡುಗಡೆ ಮಾತನಾಡಿದ ಅವರು, ಶಿಕ್ಷಣದ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಬಗ್ಗೆ ಈ ಚಿತ್ರ ಬರುತ್ತಿದೆ . ಚಿತ್ರ ಯಶಸ್ವಿಯಾಗಲಿ ಎಂದು ದತ್ತಣ್ಣ ಹಾರೈಸಿದರು.
ಇದೊಂದು ಪ್ರಸ್ತುತ ಶಿಕ್ಷಣ ವ್ಯವಸ್ಥೆ ಆಧಾರಿತ ಚಿತ್ರ SCAM (1770). ಯಾವ ಅಭ್ಯಾಸ ತಪ್ಪಿದರೂ ಬದುಕಬಹುದು. ಆದರೆ ವಿದ್ಯಾಭ್ಯಾಸ ತಪ್ಪಿದ್ದರೆ ಬದುಕುವುದು ಕಷ್ಟ. ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಶಿಕ್ಷಣಕ್ಕೆ ಸಂಬಂಧಪಟ್ಟ ಪ್ರತಿಯೊಬ್ಬರು ನೋಡಲೇಬೇಕಾದ ಚಿತ್ರವಿದು. ಟೀಸರ್ ಬಿಡುಗಡೆ ಮಾಡಿಕೊಟ್ಟ ದತ್ತಣ್ಣ ಅವರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ಎಂದು ನಿರ್ದೇಶಕ ವಿಕಾಸ್ ಪುಷ್ಪಗಿರಿ ಹೇಳಿದರು.
ಇದು ಲಾಕ್ಡೌನ್ ಸಮಯದಲ್ಲಿ ಮೂಡಿದ ಕಥೆಯಾಗಿದೆ ಮತ್ತು ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ಅನೇಕ ಪ್ರಕರಣಗಳ ಮೇಲೆ ಮಾಡಿದ ಸಂಶೋಧನೆಯನ್ನು ನಾನು ಆಧರಿಸಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ನೋಡಲೇಬೇಕಾದ ಚಿತ್ರವಿದು ಎಂದು ನಿರ್ದೇಶಕರು ತಿಳಿಸಿದ್ದಾರೆ.
ಡಿ.ಕ್ರಿಯೇಷನ್ಸ್ ಮೂಲಕ ಈ ಚಿತ್ರ ನಿರ್ಮಾಣ ಮಾಡಿರುವ ದೇವರಾಜ್ ಅವರು ಚಿತ್ರದ ಮಾತನಾಡಿದರು. ನಾಯಕ ರಂಜನ್("ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ" ಚಿತ್ರದ ಖ್ಯಾತಿ), ನಿಶ್ಚಿತ, ಹರಿಣಿ, ನಾರಾಯಣಸ್ವಾಮಿ, ಸಂಗೀತ ನಿರ್ದೇಶಕ ಸತೀಶ್ ಆರ್ಯನ್, ನಿರ್ದೇಶಕರ ಜೊತೆಗೂಡಿ ಚಿತ್ರಕಥೆ ಬರೆಯುತ್ತಿರುವ ಶಂಕರ್ ರಾಮನ್ ಮುಂತಾದ ಚಿತ್ರತಂಡದ ಸದಸ್ಯರು "SCAM (1770)" ಚಿತ್ರದ ಕುರಿತು ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


