ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣು
ಖ್ಯಾತ ಕಿರುತೆರೆ ನಟ ಸಂಪತ್ ಜಯರಾಮ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಬೆಂಗಳೂರು: ಖ್ಯಾತ ಕಿರುತೆರೆ ನಟ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ.
ಸ್ಯಾಂಡಲ್'ವುಡ್' ಕೆಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಸಂಪತ್ ಜಯರಾಮ್ ಅವರು ನಟಿಸಿದ್ದರು. ಆದರೆ, ಇತ್ತೀಚೆಗೆ ಕೆಲ ದಿನಗಳಿಂದ ಸೂಕ್ತ ಅವಕಾಶ ಸಿಗಲಿಲ್ಲ ಎಂಬ ಚಿಂತೆ ಸಂಪತ್ ಅವರಲ್ಲಿ ಎದುರಾಗಿತ್ತು ಎಂದು ವರದಿಗಳು ತಿಳಿಸಿವೆ.
ಸಂಪತ್ ಅವರು ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದ್ದು, ಆತ್ಮಹತ್ಯೆಗೆ ಖಚಿತ ಮಾಹಿತಿಗಳು ತಿಳಿದುಬಂದಿಲ್ಲ.
ಸಂಪತ್ ರಾಜ್ ಅವರು ಅಗ್ನಿ ಸಾಕ್ಷಿ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ವೈವಾಹಿಕ ಜೀವನಕ್ಕೆ ಕಾಲಿಟ್ಟು ಕೇವಲ ಒಂದು ವರ್ಷವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


