ಕಿಚ್ಚ ಸುದೀಪ್'ಗೆ ಸದಾ ಋಣಿಯಾಗಿರುತ್ತೇನೆ: ಬಿಗ್ ಬಾಸ್ ಖ್ಯಾತಿಯ ರಾಜೀವ್
ಬಿಗ್ ಬಾಸ್ ಖ್ಯಾತಿಯ ರಾಜೀವ್ ಅಭಿನಯದ ಉಸಿರೆ ಉಸಿರೆ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಮೊದಲ ಹಾಡನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ರಾಜೀವ್ ಅಭಿನಯದ ಉಸಿರೆ ಉಸಿರೆ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಮೊದಲ ಹಾಡನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ.
"ಉಸಿರೇ ನನ್ನ ಉಸಿರೇ" ಹಾಡು ಚಿತ್ರದ ಪ್ಯಾತೋ ಸಾಂಗ್ ಆಗಿದ್ದು, ಹಾಡನ್ನು ಕೆ ಕಲ್ಯಾಣ್ ಬರೆದಿದ್ದಾರೆ, ಗೀತೆಯನ್ನು ವಾಸುಕಿ ವೈಭವ್ ಹಾಡಿದ್ದರೆ, ವಿವೇಕ್ ಚಕ್ರವರ್ತಿ ಹಾಡನ್ನು ಸಂಯೋಜಿಸಿದ್ದಾರೆ.
ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕರು, ಎಲ್ಲರೂ ಸಾಮಾನ್ಯವಾಗಿ ಮೊದಲು ಡ್ಯುಯೆಟ್ ಸಾಂಗ್ ಬಿಡುಗಡೆ ಮಾಡುತ್ತಾರೆ. ಆದರೆ, ನಾವು ಪ್ಯಾತೋ ಸಾಂಗ್ ಬಿಡುಗಡೆ ಮಾಡಿದ್ದೇವೆ. ಈ ಹಾಡಿನಲ್ಲಿ ಇಡೀ ಚಿತ್ರದ ಕಥೆಯಿದೆ. ಹಾಗಾಗಿ ಈ ಹಾಡನ್ನು ಮೊದಲು ಬಿಡುಗಡೆ ಮಾಡಿದೆವು. ಉದ್ದೇಶಪೂರ್ವಕವಾಗಿಯೇ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಹಾಡನ್ನು ಗಮನವಿಟ್ಟು ಕೇಳಿದಾಗ ನಮ್ಮ ಸಿನಿಮಾದ ಕಥೆ ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

ನಟ ರಾಜೀವ್ ಅವರು ಮಾತನಾಡಿ, ಕಿಚ್ಚ ಸುದೀಪ್ ಅವರಿಗೆ ಸದಾ ಋಣಿಯಾಗಿದ್ದೇನೆ. ಸುದೀಪ್ ಅವರೇ ನಮಗೆ ಸ್ಪೂರ್ತಿ. ಅವರು ನನ್ನ ಬೆನ್ನೆಲುಬಾಗಿ ನಿಂತರು ಹಾಗೂ ಪ್ರಮುಖ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಕ್ಲೈಮ್ಯಾಕ್ಸ್ನಲ್ಲಿ ಸುದೀಪ್ ಅವರ ಅಭಿನಯದ ಸನ್ನಿವೇಶಗಳು ಸುಮಾರು 18 ನಿಮಿಷಗಳು ಬರುತ್ತದೆ. ಸುದೀಪ್ ಅವರಿಗೆ ಮತ್ತು ಇಡೀ ಚಿತ್ರ ತಂಡಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.
ಚಿತ್ರ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಚಿತ್ರ ಬಿಡುಗಡೆಗೆ ಚಿತ್ರತಂಡ ಸಿದ್ಧತೆಗಳ ನಡೆಸುತ್ತಿದೆ.
ಚಿತ್ರದಲ್ಲಿ ರಾಜೀವ್ ಜೊತೆಗೆ ಶ್ರೀಜಿತಾ ನಾಯಕಿಯಾಗಿ ನಟಿಸಿದ್ದಾರೆ. ಇದಲ್ಲದೆ, ಚಿತ್ರದಲ್ಲಿ ಖ್ಯಾತ ತೆಲುಗು ನಟರಾದ ಡಾ ಅಲಿ ಮತ್ತು ಬ್ರಹ್ಮಾನಂದಂ, ದೇವರಾಜ್, ಸಾಧುಕೋಕಿಲಾ ಮತ್ತು ಮಂಜು ಪಾವಗಡ ಕೂಡ ನಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


