ರಾಗಿಣಿ ದ್ವಿವೇದಿ ಅಭಿನಯದ ಮಹಿಳಾ ಪ್ರಧಾನ ಸಿನಿಮಾ 'ಶೀಲ' ಬಿಡುಗಡೆಗೆ ದಿನಾಂಕ ಫಿಕ್ಸ್
'ಶೀಲ' ಎಂಬ ಶೀರ್ಷಿಕೆಯ ಸ್ತ್ರೀ ಸಬಲೀಕರಣದ ಮೇಲೆ ಕೇಂದ್ರೀಕರಿಸಿದ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಕನ್ನಡ ಹಾಗೂ ಮಲಯಾಳಂನಲ್ಲಿ ನಿರ್ಮಾಣಗೊಂಡಿದ್ದು, ಈಗಾಗಲೇ ಮಲಯಾಳಂನಲ್ಲಿ ಚಿತ್ರ ಬಿಡುಗಡೆಯಾಗಿದೆ. ಇದೀಗ ಕನ್ನಡದಲ್ಲಿ ರಾಜ್ಯದಲ್ಲಿ 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ನಟಿ ರಾಗಿಣಿ ದ್ವಿವೇದಿ ಅವರೀಗ ಸಾಲು ಸಾಲು ಸಿನಿಮಾಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ನಟಿ ನಂದಕಿಶೋರ್ ಅವರ ಬಹುಭಾಷಾ ಸಿನಿಮಾ 'ವೃಷಭ' ಸಿನಿಮಾದಲ್ಲಿ ಮಲಯಾಳಂನ ಖ್ಯಾತ ನಟ ಮೋಹನ್‌ಲಾಲ್ ಅವರೊಂದಿಗೆ ನಟಿಸುತ್ತಿದ್ದಾರೆ. ಸದ್ಯ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ.
ಈಮಧ್ಯೆ, 'ಶೀಲ' ಎಂಬ ಶೀರ್ಷಿಕೆಯ ಸ್ತ್ರೀ ಸಬಲೀಕರಣದ ಮೇಲೆ ಕೇಂದ್ರೀಕರಿಸಿದ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಕನ್ನಡ ಹಾಗೂ ಮಲಯಾಳಂನಲ್ಲಿ ನಿರ್ಮಾಣಗೊಂಡಿದ್ದು, ಈಗಾಗಲೇ ಮಲಯಾಳಂನಲ್ಲಿ ಚಿತ್ರ ಬಿಡುಗಡೆಯಾಗಿದೆ. ಇದೀಗ ಕನ್ನಡದಲ್ಲಿ ಆಗಸ್ಟ್ 4 ರಂದು ರಾಜ್ಯದಲ್ಲಿ 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಇದೊಂದು ಮಹಿಳಾ ಪ್ರದಾನ ಚಿತ್ರವಾಗಿದ್ದು, ಹೆಣ್ಣುಮಕ್ಕಳು ದಿನನಿತ್ಯದ ಬದುಕಿನಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಸುತ್ತ ಸುತ್ತುತ್ತದೆ. ಹೆಣ್ಣು ಮನಸ್ಸು ಮಾಡಿದರೆ ತನಗೆ ಎದುರಾಗುವ ಸಮಸ್ಯೆಯನ್ನು ತಾನೇ ಹೇಗೆ ಬಗೆಹರಿಸಿಕೊಳ್ಳಬಹುದು ಎಂಬುದನ್ನು ಈ ಚಿತ್ರದಲ್ಲಿ ತೋರಿಸಲಾಗಿದೆ ಎನ್ನುತ್ತದೆ ಚಿತ್ರತಂಡ.

ಚಿತ್ರದ ಟ್ರೇಲರ್ ಅನ್ನು ಪ್ರಿಯಾಂಕಾ ಉಪೇಂದ್ರ ಬಿಡುಗಡೆ ಮಾಡಿದರು. ಅವರು ರಾಗಿಣಿ ದ್ವಿವೇದಿ ಅವರ ಅಭಿನಯವನ್ನು ಶ್ಲಾಘಿಸಿದರು ಮತ್ತು ಅವರಿಗೆ ಶುಭ ಕೋರಿದರು.
ಚಿತ್ರಕ್ಕೆ ಬಾಲು ನಾರಾಯಣನ್ ಆ್ಯಕ್ಷನ್ ಕಟ್ ಹೇಳಿದ್ದು, ಕೇರಳ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಚಿತ್ರದ ತಾರಾಬಳಗದಲ್ಲಿ ರಾಗಿಣಿ ದ್ವಿವೇದಿ ಅವರಲ್ಲದೆ, ಮಹೇಶ್ ನಾಯರ್, ಶೋಭರಾಜ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಚಿತ್ರಾ ಶೆಣೈ ಮತ್ತು ಆರತಿ ಗೋಪಾಲ್ ಕೂಡ ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


