ಸಿನಿಮಾ ಸುದ್ದಿ

ಮಲಗಿದ್ದ ಅತ್ತಿಗೆ ಮತ್ತೆ ಮೇಲೇಳಲೇ ಇಲ್ಲ: ಸ್ಪಂದನಾ ನಿಧನ ಸಂಬಂಧ ಶ್ರೀಮುರುಳಿ ಪ್ರತಿಕ್ರಿಯೆ

ಸ್ಪಂದನಾ ವಿಜಯ ರಾಘವೇಂದ್ರ ಸಾವಿನ ವಿಚಾರ ಕುರಿತಂತೆ ನಟ ಶ್ರೀಮುರಳಿ ಪ್ರತಿಕ್ರಿಯೆ ನೀಡಿದ್ದಾರೆ. ಅಣ್ಣ ನನಗೆ ಕಾಲ್ ಮಾಡಿ ಹೇಳಿದ್ದು ಇಷ್ಟೆ. ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ. ಆಮೇಲೆ ಏನಾಯಿತು ಎನ್ನುವುದರ ಕುರಿತು ನಾಳೆಯೇ ಸ್ಪಷ್ಟತೆ ಸಿಗಲಿದೆ.

ಮಲಗಿದ್ದ ಅತ್ತಿಗೆ ಮತ್ತೆ ಮೇಲೇಳಲೇ ಇಲ್ಲ: ಸ್ಪಂದನಾ ನಿಧನ ಸಂಬಂಧ ಶ್ರೀಮುರುಳಿ ಪ್ರತಿಕ್ರಿಯೆ
ಸ್ಪಂದನಾ
Published On :

ಬೆಂಗಳೂರು: ಸ್ಪಂದನಾ ವಿಜಯ ರಾಘವೇಂದ್ರ ಸಾವಿನ ವಿಚಾರ ಕುರಿತಂತೆ ನಟ ಶ್ರೀಮುರಳಿ ಪ್ರತಿಕ್ರಿಯೆ ನೀಡಿದ್ದಾರೆ. ಅಣ್ಣ ನನಗೆ ಕಾಲ್ ಮಾಡಿ ಹೇಳಿದ್ದು ಇಷ್ಟೆ. ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ. ಆಮೇಲೆ ಏನಾಯಿತು ಎನ್ನುವುದರ ಕುರಿತು ನಾಳೆಯೇ ಸ್ಪಷ್ಟತೆ ಸಿಗಲಿದೆ.

ಬೆಂಗಳೂರಿನಲ್ಲಿ ಮಾತನಾಡಿದ ನಟ ಶ್ರೀ ಮುರುಳಿ, ಅಣ್ಣ ನನಗೆ ಫೋನ್ ಮಾಡಿ ವಿಷಯ ತಿಳಿಸಿದರು, ಅತ್ತಿಗೆಯ ಅಗಲಿಕೆ ಆಘಾತ ಮೂಡಿಸಿದೆ, ಅವರು ಸ್ನೇಹಿತರು ಹಾಗೂ ಕುಟುಂಬಸ್ಥರ ಜೊತೆ ಪ್ರವಾಸಕ್ಕೆ ತೆರಳಿದ್ದರು.  ಶೂಟಿಂಗ್ ಮುಗಿಸಿಕೊಂಡು ವಿಜಯ ರಾಘವೇಂದ್ರ ಕೂಡ ಅವರೊಂದಿಗೆ ಭಾಗಿಯಾಗಿದ್ದರು ಎಂದು ಮರುಳಿ ತಿಳಿಸಿದ್ದಾರೆ.

ಹೋಟೆಲ್​ವೊಂದರಲ್ಲಿ ಮಲಗಿದ್ದ ಸ್ಪಂದನಾ ಅವರು ಮೇಲೆ ಎದ್ದಿಲ್ಲ. ಲೋ ಬಿಪಿ ಆಗಿ ಹೃದಯಾಘಾತ ಆಗಿರಬಹುದು ಎಂದು ಹೇಳಲಾಗುತ್ತಿದೆ. ಇತ್ತೀಚೆಗಷ್ಟೇ ಸ್ಪಂದನಾ ಅವರು ಸುಮಾರು 16 ಕೆಜಿ ತೂಕ ಇಳಿಸಿಕೊಂಡಿದ್ದರು ಎನ್ನಲಾಗುತ್ತಿದೆ.

ನಿನ್ನೆಯಷ್ಟೇ ಸ್ಪಂದನಾ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಸರಿಯಾದ ಮಾಹಿತಿ ಇನ್ನೂ ಅವರ ಕುಟುಂಬಕ್ಕೆ ತಲುಪಿಲ್ಲ. 2007ರ ಆಗಸ್ಟ್ 26ರಂದು ವಿಜಯ್-ಸ್ಪಂದನಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ವಾರ್ಷಿಕೋತ್ಸವಕ್ಕೆ ಇನ್ನು 19 ದಿನಗಳಷ್ಟೇ ಬಾಕಿಯಿತ್ತು. ಅಷ್ಟರಲ್ಲಿ ಅನಾಹುತ ಸಂಭವಿಸಿದೆ.  ಇಂದು ಥೈಲ್ಯಾಂಡ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.