ನಟ ಉಪೇಂದ್ರ ಆಕ್ಷೇಪಾರ್ಹ ಹೇಳಿಕೆ: ತಕ್ಷಣ ವಿಚಾರಣೆಗೆ ಹಾಜರಾಗಲು ನೋಟಿಸ್
ನಟ ಉಪೇಂದ್ರ ಅವರ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಆಗಸ್ಟ್ 13ರಂದು ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈಗ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ.

ಬೆಂಗಳೂರು: ನಟ ಉಪೇಂದ್ರ ಅವರ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಆಗಸ್ಟ್ 13ರಂದು ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈಗ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ.
ಪ್ರಕರಣ ಸಂಬಂಧ ತಕ್ಷಣ ವಿಚಾರಣೆಗೆ ಹಾಜರಾಗುವಂತೆ ಉಪೇಂದ್ರ ಅವರಿಗೆ ಸೂಚಿಸಲಾಗಿದೆ. ನಟನ ಕತ್ರಿಗುಪ್ಪೆ ಮತ್ತು ಸದಾಶಿವನಗರ ಮನೆಗೆ ;ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ನೋಟಿಸ್ ನೀಡಿದ್ದಾರೆ. ಸದ್ಯ ವಾಟ್ಸ್ಆ್ಯಪ್ ಮೂಲಕ ನೋಟಿಸ್ ರವಾನೆ ಮಾಡಲಾಗಿದೆ. ಪ್ರಕರಣ ಸಂಬಂಧ ಸ್ಥಳ ಮಹಜರು ನಡೆಯಲಿದೆ. ವಿಡಿಯೋ ಮಾಡಿದ ಜಾಗದ ಸ್ಥಳ ಮಹಜರನ್ನು ಪೊಲೀಸರು ಮಾಡಲಿದ್ದಾರೆ. ದೂರುದಾರ ಸಮ್ಮುಖದಲ್ಲೇ ಈ ಪ್ರಕ್ರಿಯೆ ನಡೆಯಲಿದೆ.
ತಪ್ಪಿನ ಅರಿವಾದ ಬಳಿಕ ಉಪೇಂದ್ರ ಕ್ಷಮೆ ಕೇಳಿದ್ದರು. ಆದರೆ, ಈ ತಪ್ಪನ್ನು ಕೆಲವರು ಮನ್ನಿಸಿಲ್ಲ. ಅವರ ವಿರುದ್ಧ ಕೆಲವರು ಕಾನೂನು ಸಮರ ಸಾರಿದ್ದಾರೆ. ಇದರಿಂದ ನಟನಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಇತ್ತೀಚೆಗೆ ಲೈವ್ನಲ್ಲಿ ಮಾತನಾಡಿದ್ದ ಉಪೇಂದ್ರ ಅವರು ಹೊಲಗೇರಿ ಶಬ್ದ ಬಳಕೆ ಮಾಡಿದ್ದರು. ಆಕ್ಷೇಪಾರ್ಹ ಪದ ಬಳಕೆ ಪ್ರಕರಣದಲ್ಲಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


