ಸಿನಿಮಾ ಸುದ್ದಿ

ಕಾರು ಡಿಕ್ಕಿ ಪ್ರಕರಣ: ಸಿಬ್ಬಂದಿಯನ್ನು ಮನೆಗೆ ಕರೆಸಿ ಕ್ಷಮೆ ಕೇಳಿ ರಚಿತಾ ರಾಮ್; ಡಿಂಪಲ್ ಕ್ವೀನ್ ನಡೆಗೆ ವ್ಯಾಪಕ ಪ್ರಶಂಸೆ

ಇದು ಆಕಸ್ಮಿಕವಾಗಿ ನಡೆದಿರುವ ಘಟನೆ. ಈ ವಿಚಾರ ಗಮನಕ್ಕೆ ಬಂದಿರಲಿಲ್ಲ ಎಂದಿದ್ದಾರೆ. ಅಷ್ಟಲ್ಲದೆ, ರಂಗಪ್ಪ ಅವರನ್ನು ತಮ್ಮ ಮನೆಗೆ ಕರೆದು ಕ್ಷಮೆ ಕೋರಿದ್ದಾರೆ. ಈ ಸಂದರ್ಭದ ವಿಡಿಯೊವನ್ನೂ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಾರು ಡಿಕ್ಕಿ ಪ್ರಕರಣ: ಸಿಬ್ಬಂದಿಯನ್ನು ಮನೆಗೆ ಕರೆಸಿ ಕ್ಷಮೆ ಕೇಳಿ ರಚಿತಾ ರಾಮ್; ಡಿಂಪಲ್ ಕ್ವೀನ್ ನಡೆಗೆ ವ್ಯಾಪಕ ಪ್ರಶಂಸೆ
ಸಿಬ್ಬಂದಿ ಜೊತೆ ರಚಿತಾ ರಾಮ್
Published On :

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಲಾಲ್‌ಬಾಗ್‌ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನಕ್ಕೆ ನಟಿ ರಚಿತಾ ರಾಮ್‌ ಸೋಮವಾರ ಆಗಮಿಸಿದ್ದರು. ಈ ವೇಳೆ ಅವರ ಕಾರು, ಸ್ವಚ್ಚತಾ ಕಾರ್ಮಿಕರೊಬ್ಬರಿಗೆ ತಾಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿರಲಿಲ್ಲ. ಇದೀಗ ಲಾಲ್‌ಬಾಗ್ ಸಿಬ್ಬಂದಿಯನ್ನ ತಮ್ಮ ಮನೆಗೆ ಕರೆಸಿ ರಚಿತಾ ಕ್ಷಮೆ ಕೋರಿದ್ದಾರೆ.

ರಚಿತಾ ಪ್ರಯಾಣಿಸುತ್ತಿದ್ದ ಕಾರು ಸ್ವಚ್ಛತಾ ಕಾರ್ಮಿಕನಿಗೆ ಗುದ್ದಿತ್ತು. ಈ ಘಟನೆ ನಡೆದಾಗ ರಚಿತಾ ರಾಮ್ ಕಾರಲ್ಲಿ ಇದ್ದರೂ, ಏನೂ ಆಗಿಯೇ ಇಲ್ಲ ಎನ್ನುವಂತೆ ಪ್ಲವರ್ ಶೋನತ್ತ ತೆರಳಿದ್ದರು. ಕಾರು ನಿಲ್ಲಿಸದೇ ಕ್ಷಮೆಯಾಚನೆಯೂ ಮಾಡದೇ ಹೊರಟ ರಚಿತಾ ಹಾಗೂ ಡ್ರೈವರ್ ನಡೆಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ರಚಿತಾ ರಾಮ್ ಸಿಬ್ಬಂದಿಯನ್ನು ಮನೆಗೆ ಕರೆಸಿ ಕ್ಷಮೆ ಕೇಳಿದ್ದಾರೆ.

ಇದು ಆಕಸ್ಮಿಕವಾಗಿ ನಡೆದಿರುವ ಘಟನೆ. ಈ ವಿಚಾರ ಗಮನಕ್ಕೆ ಬಂದಿರಲಿಲ್ಲ ಎಂದಿದ್ದಾರೆ. ಅಷ್ಟಲ್ಲದೆ, ರಂಗಪ್ಪ ಅವರನ್ನು ತಮ್ಮ ಮನೆಗೆ ಕರೆದು ಕ್ಷಮೆ ಕೋರಿದ್ದಾರೆ. ಈ ಸಂದರ್ಭದ ವಿಡಿಯೊವನ್ನೂ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೊದಲ್ಲಿ ರಂಗಪ್ಪ ಅವರಲ್ಲಿ ಕ್ಷಮೆ ಕೇಳುವ ರಚಿತಾ, ಇನ್ನುಮುಂದೆ ಹೀಗಾಗದಂತೆ ಎಚ್ಚರ ವಹಿಸುವುದಾಗಿ ತಿಳಿಸಿದ್ದಾರೆ. ರಚಿತಾ ರಾಮ್ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ನನ್ನ ಕಾರು ಸಿಬ್ಬಂದಿಗೆ ಡಿಕ್ಕಿ ಹೊಡೆದಿದ್ದು ನನ್ನ ಗಮನಕ್ಕೆ ಬಂದಿಲ್ಲ. ನೆನ್ನೆ ಇದು ಆಕಸ್ಮಿಕವಾಗಿ ನಡೆದ ಘಟನೆ ಆಗ ನನಗೆ ಗೊತ್ತಾಗಲಿಲ್ಲ ಎಂದು ಹೇಳಿ ನಟಿ ರಚಿತಾ ರಾಮ್ ಕ್ಷಮೆಯಾಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.