ಇನ್ಮುಂದೆ ಕರಿಮಣಿ ಮಾಲೀಕ ನಾನಲ್ಲ: ಪತ್ನಿಗೆ ವಿಚ್ಛೇದನ ನೀಡಿದ ಬಗ್ಗೆ ಕಿರಿಕ್ ಕೀರ್ತಿ ಅಧಿಕೃತ ಮಾಹಿತಿ!
ಪತ್ರಕರ್ತ, ನಿರೂಪಕ, ಬಿಗ್‌ಬಾಸ್ ಕನ್ನಡದ ಸ್ಪರ್ಧಿ, ಸಿನಿಮಾ ಹೀಗೆ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದ ಕಿರಿಕ್ ಕೀರ್ತಿ, ತಮ್ಮ ದಾಂಪತ್ಯದ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಬೆಂಗಳೂರು: ಪತ್ರಕರ್ತ, ನಿರೂಪಕ, ಬಿಗ್‌ಬಾಸ್ ಕನ್ನಡದ ಸ್ಪರ್ಧಿ, ಸಿನಿಮಾ ಹೀಗೆ ಹಲವು ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದ ಕಿರಿಕ್ ಕೀರ್ತಿ, ತಮ್ಮ ದಾಂಪತ್ಯದ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಪತ್ನಿ ಅರ್ಪಿತಾ ಜತೆಗೆ ವಿಚ್ಛೇದನ ಪಡೆದಿರುವ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೆಯೇ ಕಿರಿಕ್ ಕೀರ್ತಿ ಮತ್ತು ಅರ್ಪಿತಾ ನಡುವೆ ಯಾವುದೂ ಸರಿಯಿಲ್ಲ ಎಂಬ ವದಂತಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಅದ್ಯಾವ ಮಟ್ಟಿಗೆ ಎಂದರೆ, ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೂ ಕೀರ್ತಿ ಬಂದಿದ್ದರಂತೆ. ಈಗ ಅಧಿಕೃತವಾಗಿ ಕಿರಿಕ್ ಕೀರ್ತಿ (ಕೀರ್ತಿ ಶಂಕರಘಟ್ಟ) ಅವರು ತಮ್ಮ ಪತ್ನಿ ಅರ್ಪಿತಾ ಅವರಿಗೆ ವಿಚ್ಛೇದನ ನೀಡಿದ್ದಾರೆ.
ಈ ವಿಷಯವನ್ನು ಕೀರ್ತಿ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, ‘ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜತೆಗಿನ ಪತಿ-ಪತ್ನಿ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ.. ಅಧಿಕೃತವಾಗಿ ಇನ್ನುಮುಂದೆ ಕರಿಮಣಿ ಮಾಲೀಕ ನಾನಲ್ಲ. ಒಂದೊಳ್ಳೆಯ ಬದುಕು ಅವಳಿಗೂ ಸಿಗಲಿ, ಕಹಿನೆನಪುಗಳು ಮರೆತು ಹೊಸಜೀವನಕ್ಕೆ ನಾಂದಿ ಹಾಡಲಿ, ನನಗೂ ನಿಮ್ಮ ಪ್ರೀತಿ ಹಾರೈಕೆ ಮುಂದುವರಿಯಲಿ’ ಎಂದು ಕಿರಿಕ್ ಕೀರ್ತಿ ವಿಚ್ಛೇದನ ಆಗಿರುವುದನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಈ ಮೊದಲು ಕಿರಿಕ್ ಕೀರ್ತಿ ಹಾಗೂ ಅರ್ಪಿತಾ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಚರ್ಚಿಸಿದ್ದರು. ಈಗ ಈ ಬಗ್ಗೆ ಸ್ವತಃ ಕೀರ್ತಿ ಅಂತಿಮ ತೆರೆ ಎಳೆದಿದ್ದಾರೆ. 2016ರಲ್ಲಿ ಕನ್ನಡ ಬಿಗ್‌ಬಾಸ್ ಶೋನಲ್ಲಿ ಕಿರಿಕ್ ಕೀರ್ತಿ ಅವರು ರನ್ನರ್‌ಅಪ್ ಆಗಿ ಗಮನ ಸೆಳೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


