ಸಿನಿಮಾ ಸುದ್ದಿ

ಮತ್ತೆ ಸಿನಿಮಾದಲ್ಲಿ ಬ್ಯುಸಿಯಾದ 'ಯುವರಾಜ': ಆಗಸ್ಟ್ 23ಕ್ಕೆ ದೊಡ್ಡ ಬ್ಯಾನರ್‌ನಲ್ಲಿ ನಿಖಿಲ್ ಹೊಸ ಚಿತ್ರಕ್ಕೆ ಮುಹೂರ್ತ!

ರಾಜ್ಯ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದ ನಿಖಿಲ್ ಕುಮಾರಸ್ವಾಮಿ ಮತ್ತೆ ಸಿನಿಮಾ ನಟನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಚುನಾವಣೆಗೂ ಮುನ್ನ ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ.

ಮತ್ತೆ ಸಿನಿಮಾದಲ್ಲಿ ಬ್ಯುಸಿಯಾದ 'ಯುವರಾಜ': ಆಗಸ್ಟ್ 23ಕ್ಕೆ ದೊಡ್ಡ ಬ್ಯಾನರ್‌ನಲ್ಲಿ ನಿಖಿಲ್ ಹೊಸ ಚಿತ್ರಕ್ಕೆ ಮುಹೂರ್ತ!
ನಿಖಿಲ್ ಕುಮಾರಸ್ವಾಮಿ
Published On :

ಜಾಗ್ವಾರ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬಂದ ನಿಖಿಲ್ ಬಳಿಕ 'ಸೀತಾರಾಮ ಕಲ್ಯಾಣ' ಚಿತ್ರದಲ್ಲಿ ಮಿಂಚಿದರು. 'ಕುರುಕ್ಷೇತ್ರ' ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ಗಮನ ಸೆಳೆದರು.

2 ವರ್ಷದ ಹಿಂದೆ ಬಂದ 'ರೈಡರ್' ಸಿನಿಮಾ ಪ್ರೇಕ್ಷಕರ ಮನಗೆದ್ದರೂ ಬಾಕ್ಸಾಫೀಸ್‌ನಲ್ಲಿ ಮುಗ್ಗರಿಸಿತ್ತು. ಆ ಬಳಿಕ ಯಾವುದೇ ಸಿನಿಮಾದಲ್ಲಿ ನಿಖಿಲ್ ನಟಿಸಲಿಲ್ಲ.

ರಾಜ್ಯ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದ ನಿಖಿಲ್ ಕುಮಾರಸ್ವಾಮಿ ಮತ್ತೆ ಸಿನಿಮಾ ನಟನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಚುನಾವಣೆಗೂ ಮುನ್ನ ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ.

ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಚುನಾವಣೆ ಮುಗಿದ ಕಾರಣದಿಂದಾಗಿ ಮತ್ತೆ ಚಿತ್ರರಂಗದತ್ತ ನಿಖಿಲ್ ಮುಖ ಮಾಡಿದ್ದಾರೆ.

ದಕ್ಷಿಣ ಭಾರತದ ಶ್ರೀಮಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್  ಇದೀಗ ನಿಖಿಲ್ ಅವರ ಸಿನಿಮಾ ನಿರ್ಮಾಣ ಮಾಡಲು ಮುಂದೆ ಬಂದಿದೆ. ನಿಖಿಲ್ ಕೂಡ ಈ ಕಂಪೆನಿಯಲ್ಲಿ ಕೆಲಸ ಮಾಡಲು ಒಪ್ಪಿಕೊಂಡಿದ್ದರಿಂದ ಹೊಸ ಚಿತ್ರಕ್ಕೆ ಆಗಸ್ಟ್ 23 ರಂದು ಚಾಲನೆ  ನೀಡಲಾಗುತ್ತಿದೆ. ತಮಿಳಿನಲ್ಲಿ ದುಬಾರಿ ಬಜೆಟ್ ಸಿನಿಮಾ ಮಾಡಿದ ಲೈಕಾ ಇದೀಗ ಕನ್ನಡದ ನಟನ ಮೇಲೆ ಹಣ ಹೂಡುತ್ತಿದೆ.

ಬಹಳ ಅದ್ಧೂರಿಯಾಗಿ ನಿಖಿಲ್ 4ನೇ ಸಿನಿಮಾ ಶುರುವಾಗಲಿದೆ. ಚಿತ್ರದಲ್ಲಿ ದಕ್ಷಿಣ ಭಾರತ ಚಿತ್ರರಂಗದ ಘಟಾನುಘಟಿ ಕಲಾವಿದರು, ತಂತ್ರಜ್ಞರು ಕೆಲಸ ಮಾಡಲಿದ್ದಾರೆ. 5 ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾ ನಿರ್ಮಾಣವಾಗಲಿದೆ. ಬಹುಕೋಟಿ ವೆಚ್ಚದಲ್ಲಿ ಈ ಪ್ರಾಜೆಕ್ಟ್ ಸಿದ್ಧವಾಗಲಿದೆ. ಪರಭಾಷೆಯ ನಿರ್ದೇಶಕರು ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಸಾಧ್ಯತೆಯಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.