ನಿಖಿಲ್ ಕುಮಾರಸ್ವಾಮಿ ಹೊಸ ಚಿತ್ರಕ್ಕೆ ಅದ್ಧೂರಿ ಮುಹೂರ್ತ: ಶುಭ ಕೋರಿದ ಎಚ್‌ಡಿಕೆ, ಎಚ್‌ಡಿ ದೇವೇಗೌಡ
ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಇದೀಗ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ. ಸಿನಿಮಾದಲ್ಲಿ ನಿಖಿಲ್ ಕುಮಾರ್ ನಟಿಸುತ್ತಿದ್ದು, ಇತ್ತೀಚೆಗಷ್ಟೇ ಸಿನಿಮಾದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ನೆರವೇರಿತು.

ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಇದೀಗ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದೆ. ಸಿನಿಮಾದಲ್ಲಿ ನಿಖಿಲ್ ಕುಮಾರ್ ನಟಿಸುತ್ತಿದ್ದು, ಇತ್ತೀಚೆಗಷ್ಟೇ ಸಿನಿಮಾದ ಮುಹೂರ್ತ ಸಮಾರಂಭ ಅದ್ಧೂರಿಯಾಗಿ ನೆರವೇರಿತು. ದೀಪ ಬೆಳಗುವ ಮೂಲಕ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ನಿಖಿಲ್ ಕುಟುಂಬಸ್ಥರು ಮತ್ತು ಲೈಕಾ ಅಧ್ಯಕ್ಷ ಸುಭಾಸ್ಕರನ್ ಇದ್ದರು.
ಬೋಗನ್, ಭೂಮಿ, ಮತ್ತು ರೋಮಿಯೋ ಅಂಡ್ ಜೂಲಿಯೆಟ್‌ನಂತಹ ತಮಿಳು ಸಿನಿಮಾಗಳನ್ನು ನಿರ್ದೇಶಿಸಿದ್ದ ಲಕ್ಷ್ಮಣ್ ಅವರು ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಬಹುಭಾಷಾ ಚಿತ್ರವೆಂದು ಬಿಂಬಿಸಲಾದ ಈ ಸಿನಿಮಾಗೆ ನಾಗ ಶೌರ್ಯ ನಟನೆಯ ತೆಲುಗಿನ 'ರಂಗಬಲಿ' ಸಿನಿಮಾದಲ್ಲಿ ನಟಿಸಿದ್ದ ಯುಕ್ತಿ ಥರೇಜಾ ಅವರನ್ನು ಕರೆತರಲಾಗಿದೆ. ಇತ್ತೀಚೆಗಷ್ಟೇ ನಮೋ ಭೂತಾತ್ಮ 2 ಚಿತ್ರದ ಭಾಗವಾಗಿದ್ದ ಕೋಮಲ್ ಕುಮಾರ್ ಕೂಡ ಚಿತ್ರದಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸಲಿದ್ದಾರೆ.

ಕೊನೆಯ ಬಾರಿಗೆ ರೈಡರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ನಿಖಿಲ್, ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ಕೊಚ್ಚ ವಿರಾಮ ತೆಗೆದುಕೊಂಡಿದ್ದರು. ಸೆಪ್ಟೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭಿಸಲು ಚಿತ್ರತಂಡ ನಿರ್ಧರಿಸಿದೆ.
ಲೈಕಾ ಪ್ರೊಡಕ್ಷನ್ಸ್ ಜೊತೆಗಿನ ಸಹಯೋಗದ ಬಗ್ಗೆ ತನ್ನ ಹರ್ಷವನ್ನು ವ್ಯಕ್ತಪಡಿಸಿದ ನಿಖಿಲ್, ಮುಂದಿನ ವರ್ಷದಲ್ಲಿ ಮೂರು ಚಲನಚಿತ್ರಗಳನ್ನು ಮಾಡುವ ಮತ್ತು ಹಲವಾರು ಚಿತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುವುದಾಗಿ ಬಹಿರಂಗಪಡಿಸಿದರು.
ಕಾಂತಾರ ಮತ್ತು ವಿಕ್ರಾಂತ್ ರೋಣ ಸಿನಿಮಾಗಳ ಸಂಗೀತಕ್ಕಾಗಿ ಮೆಚ್ಚುಗೆ ಪಡೆದ ಅಜನೀಶ್ ಲೋಕನಾಥ್ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಲಿದ್ದು, ವಂಶಿ ಪಚ್ಚಿಪುಲುಸು ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರದ ಸಂಭಾಷಣೆಯನ್ನು ರಘು ನಿಡುವಳ್ಳಿ ಬರೆಯಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


