'ದಿ ವೆಕೆಂಟ್ ಹೌಸ್' ಮೂಲಕ ನಿರ್ದೇಶಕಿಯಾಗುತ್ತಿದ್ದಾರೆ 'ಲೋಕಲ್ ಟ್ರೈನ್' ಖ್ಯಾತಿಯ ನಟಿ ಎಸ್ತಾರ್ ನರೋನಾ!
ಕನ್ನಡ, ತೆಲುಗು, ತುಳು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಎಸ್ತಾರ್ ನರೋನಾ ಇದೀಗ ಹೊಸ ಪಯಣ ಆರಂಭಿಸುತ್ತಿದ್ದಾರೆ.

ಕನ್ನಡ, ತೆಲುಗು, ತುಳು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಎಸ್ತಾರ್ ನರೋನಾ ಇದೀಗ ಹೊಸ ಪಯಣ ಆರಂಭಿಸುತ್ತಿದ್ದಾರೆ. ನವಿ, ಅತಿರಥ, ನುಗ್ಗೇಕಾಯಿ, ಲೋಕಲ್ ಟ್ರೈನ್, ಮತ್ತು ಲಂಕೆಯಂತಹ ಸಿನಿಮಾಗಳಲ್ಲಿನ ಪಾತ್ರಗಳಿಗೆ ಹೆಸರಾದ ಎಸ್ತಾರ್ ನೊರೋನಾ, ಅನುಪಮ್ ಖೇರ್ ಅವರ ನಟನಾ ಶಾಲೆಯಲ್ಲಿ ತರಬೇತಿ ಪಡೆದಿದ್ದಾರೆ. ಈಗ 'ದಿ ವೆಕೆಂಟ್ ಹೌಸ್' ಮೂಲಕ ನಿರ್ದೇಶಕಿಯಾಗಿ ಗುರುತಿಸಿಕೊಳ್ಳಲು ಸಜ್ಜಾಗುತ್ತಿದ್ದಾರೆ.

ಮುಂಬರುವ ಈ ಸಿನಿಮಾದಲ್ಲಿ ಅವರು ನಿರ್ದೇಶನದೊಂದಿಗೆ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ನಿರ್ಮಾಣ, ಸಂಗೀತ, ಕಥೆ ಮತ್ತು ಕಾಸ್ಟ್ಸೂಮ್ಸ್ ಸೇರಿದಂತೆ ಹಲವು ಜವಾಬ್ದಾರಿಗಳನ್ನು ಹೊರಲಿದ್ದಾರೆ.
ಎಸ್ತಾರ್ ಪ್ರಕಾರ, 'ದಿ ವೆಕೆಂಟ್ ಹೌಸ್' ಸಿನಿಮಾ ಇಬ್ಬರ ನಡುವಿನ ಪ್ರೇಮಕಥೆಯ ಸುತ್ತ ಸುತ್ತುತ್ತದೆ. ಚಿತ್ರತಂಡ ಚಿತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದಾರೆ. ಜಾನೆಟ್ ನೊರೋನಾ ಪ್ರೊಡಕ್ಷನ್ಸ್ ನಿರ್ಮಿಸುತ್ತಿರುವ ಈ ಚಿತ್ರದ ಪ್ರಮುಖ ಭಾಗವನ್ನು ಮಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ.
ಚಿತ್ರಕ್ಕೆ ನರೇಂದ್ರ ಗೌಡ ಅವರ ಛಾಯಾಗ್ರಹಣ ಮತ್ತು ವಿಜಯ್ ರಾಜ್ ಸಂಕಲನವಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಚಿತ್ರ ತೆರೆಗೆ ಬರುವ ನಿರೀಕ್ಷೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


