ಸೂಪರ್ ಸ್ಟಾರ್ ರಜನಿಕಾಂತ್ ಬೆಂಗಳೂರು ರೌಂಡ್ಸ್: ಜಯನಗರ ಬಿಎಂಟಿಸಿ ಡಿಪೋ, ಚಾಮರಾಜಪೇಟೆ ರಾಯರ ಮಠಕ್ಕೆ ಭೇಟಿ
ಜೈಲರ್ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಬೆಂಗಳೂರಿಗೆ ತಲೈವಾ ರಜನಿಕಾಂತ್ ಭೇಟಿ ನೀಡಿದ್ದಾರೆ. ಚಿತ್ರರಂಗಕ್ಕೆ ಬರುವ ಮುನ್ನ ಕಾರ್ಯ ನಿರ್ವಹಿಸಿದ್ದ ಜಯನಗರ ಡಿಪೋಗೆ ರಜನಿ ಅಚ್ಚರಿಯ ಭೇಟಿ ನೀಡಿದ್ದಾರೆ.

ಬೆಂಗಳೂರು: ಜೈಲರ್ ಸಿನಿಮಾದ ಸಕ್ಸಸ್ ಬೆನ್ನಲ್ಲೇ ಬೆಂಗಳೂರಿಗೆ ತಲೈವಾ ರಜನಿಕಾಂತ್ ಭೇಟಿ ನೀಡಿದ್ದಾರೆ. ಚಿತ್ರರಂಗಕ್ಕೆ ಬರುವ ಮುನ್ನ ಕಾರ್ಯ ನಿರ್ವಹಿಸಿದ್ದ ಜಯನಗರ ಡಿಪೋಗೆ ರಜನಿ ಸರ್ಪ್ರೈಸ್ ವಿಸಿಟ್ ನೀಡಿದ್ದಾರೆ.
ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಸಾಕಷ್ಟು ವರ್ಷಗಳ ಕಾಲ ರಜನಿಕಾಂತ್ ಬೆಂಗಳೂರಿನಲ್ಲೇ ನೆಲೆಸಿದ್ದರು. ಬೆಂಗಳೂರಿಗೂ ತಲೈವಾಗೂ ನಂಟಿದೆ. ಚಿತ್ರರಂಗಕ್ಕೆ ಬರುವ ಮುನ್ನ ಜಯನಗರದ ಡಿಪೋದಲ್ಲಿ ಕಂಡಕ್ಟರ್ ಆಗಿ ರಜನಿಕಾಂತ್ ಕಾರ್ಯ ನಿರ್ವಹಿಸಿದ್ದರು.
ತಾವು ಕರ್ತವ್ಯ ನಿರ್ವಹಿಸಿದ್ದ ಜಾಗಕ್ಕೆ ಸರ್ಪ್ರೈಸ್ ವಿಸಿಟ್ ನೀಡಿ, ಕಂಡಕ್ಟರ್- ಡ್ರೈವರ್ ಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಸುಮಾರು ಹತ್ತು ನಿಮಿಷಗಳ ಕಾಲ ನಟ ಮಾತುಕತೆ ನಡೆಸಿದ್ದಾರೆ. ರಜನಿಕಾಂತ್ ಭೇಟಿಗೆ ಚಾಲಕರು ಶಾಕ್ ಆಗಿದ್ದಾರೆ.
ಬೆಂಗಳೂರಿನ ಜಯನಗರ ಡಿಪೋಗೆ ಭೇಟಿ ನೀಡಿ ಹಳೆಯ ನೆನಪನ್ನು ನಟ ಸ್ಮರಿಸಿದ್ದರು. ತಲೈವಾ ಭೇಟಿ ಜಯನಗರದ ಚಾಲಕರಲ್ಲಿ ಸಂಭ್ರಮ ಮನೆ ಮಾಡಿತ್ತು. ಚಾಮರಾಜಪೇಟೆಯ ರಾಯರ ಮಠಕ್ಕೂ ರಜನಿಕಾಂತ್ ಭೇಟಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


