ಅಭಿಮಾನಿಗಳ ಕುತೂಹಲಕ್ಕೆ ತೆರೆ: ಯಶ್ 19ನೇ ಚಿತ್ರದ ಹೆಸರು 'Toxic', ಏಪ್ರಿಲ್ 10ಕ್ಕೆ ಸಿನಿಮಾ ತೆರೆಗೆ!
ರಾಕಿಂಗ್ ಸ್ಟಾರ್ ಯಶ್ ಅಭಿನಯದ 19ನೇ ಸಿನಿಮಾದ ಶೀರ್ಷಿಗೆ ಇಂದು ಘೋಷಣೆಯಾಗಿದೆ. ಚಿತ್ರಕ್ಕೆ Toxic ಟೈಟಲ್ ನೀಡಿರುವ ಚಿತ್ರ ತಂಡ ಪೋಸ್ಟರ್ ನ್ನು ಶುಕ್ರವಾರ ಬಿಡುಗಡೆ ಮಾಡಿದೆ.

ರಾಕಿಂಗ್ ಸ್ಟಾರ್ ಯಶ್ ಅಭಿನಯದ 19ನೇ ಸಿನಿಮಾದ ಶೀರ್ಷಿಗೆ ಇಂದು ಘೋಷಣೆಯಾಗಿದೆ. ಚಿತ್ರಕ್ಕೆ Toxic ಟೈಟಲ್ ನೀಡಿರುವ ಚಿತ್ರ ತಂಡ ಪೋಸ್ಟರ್ ನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ಕೆವಿಎನ್ ಸಂಸ್ಥೆ ನಿರ್ಮಾಣ ಮಾಡುತ್ತಿರುವ ಸಿನಿಮಾ ಇದಾಗಿದ್ದು ಟೈಟಲ್ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಿತ್ತು. ಇದೀಗ ಕುತೂಹಲಕ್ಕೆ ತೆರೆ ಬಿದ್ದಿದ್ದು, ಚಿತ್ರದಲ್ಲಿನ ಪಾತ್ರಧಾರಿಗಳ ಕುರಿತು ಕುತೂಹಲಗಳು ಶುರುವಾಗಿದೆ.
ಕೆವಿನ್ ಪ್ರೊಡಕ್ಷನ್ ಯುಟ್ಯೂಬ್ ಚಾನೆಲ್ನಲ್ಲಿ ಕೌಂಟೌನ್ ಆರಂಭವಾಗಿತ್ತು. ಸಾವಿರಾರೂ ಅಭಿಮಾನಿಗಳು ವೀಕ್ಷಣೆ ಮಾಡಿ ಟೈಟಲ್ ಗೆಸ್ ಮಾಡುತ್ತಿದ್ದರು. ಅಂತಿಮವಾಗಿ ಚಿತ್ರದ ಟೈಟಲ್ ರಿವೀಲ್ ಆಗಿದೆ.
ಯಶ್ ಅವರ ‘ಕೆಜಿಎಫ್ 2’ ಸಿನಿಮಾ 2022ರ ಏಪ್ರಿಲ್ನಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಯಶ್ ಅವರ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲಗಳು ಕೆರಳಿದ್ದವು.
ಇದನ್ನೂ ಓದಿ: ಸ್ವಲ್ಪ ತಾಳ್ಮೆ ಇರಲಿ, ಅಡುಗೆ ರೆಡಿಯಾದ ಮೇಲೆ ಊಟ ಬಡಿಸಿದರೆ ಚಂದ: ಮುಂದಿನ ಸಿನಿಮಾ ಬಗ್ಗೆ ನಟ ಯಶ್ ಪ್ರತಿಕ್ರಿಯೆ!
‘ಟಾಕ್ಸಿಕ್’ ಚಿತ್ರಕ್ಕೆ ಗೀತು ಮೋಹನ್ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಟೈಟಲ್ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಹಿನ್ನೆಲೆ ಸಂಗೀತ ಕೂಡ ಗಮನ ಸೆಳೆದಿದೆ. ಈ ಚಿತ್ರದ ರಿಲೀಸ್ ದಿನಾಂಕವನ್ನೂ ರಿವೀಲ್ ಮಾಡಲಾಗಿದೆ. 10-4-2025ರಂದು ಸಿನಿಮಾ ಥಿಯೇಟರ್ನಲ್ಲಿ ರಿಲೀಸ್ ಆಗಲಿದೆ.
ಈ ನಡುವೆ ಚಿತ್ರದ ಕುರಿತು ಹೊಸ ವಿಷಯವೊಂದು ಹರಿದಾಡುತ್ತಿದೆ. ಮೊನ್ನೆಯಷ್ಟೇ ಈ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಈ ಚಿತ್ರಕ್ಕೆ ಕೇವಲ ಒಬ್ಬರು ಅಲ್ಲ, ಮೂವರು ನಾಯಕಿಯರ ಇರಲಿದ್ದಾರೆಂದು ಹೇಳಲಾಗುತ್ತಿದೆ.
ಸಾಯಿ ಪಲ್ಲವಿ ಜೊತೆಗೆ ಮೃಣಲಾ ಠಾಕೂರ್ ಹೀಗೆ ಮೂವರು ಹಿರೋಯಿನ್ ಚಿತ್ರದಲ್ಲಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


